ಕೊರೊನಾ ಬೇಗ ಹೋಗಲ್ಲ, ತಾಳ್ಮೆ ಕಳೆದುಕೊಳ್ಳಬೇಡಿ ಎಂದ ಶ್ರೀರಾಮುಲು
ಹಾಸನ, ಮೇ 1: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಹಾಸನದ ಜಿಲ್ಲಾಸ್ಪತ್ರೆಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಕೇಂದ್ರದಲ್ಲಿ ಸಭೆ ನಡೆಸಿದರು.
Recommended Video
ಈ ವೇಳೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ''ಕೊರೊನಾ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ. ಹೀಗಾಗಿ ಯಾರೂ ತಾಳ್ಮೆ ಕಳೆದುಕೊಳ್ಳಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸಬೇಕು'' ಎಂದರು.
''ಕೊರೊನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ 5 ವರ್ಷ ಜೈಲು ಶಿಕ್ಷೆ ಆಗುತ್ತದೆ. ಮೇ 3 ರ ಬಳಿಕ ಲಾಕ್ ಡೌನ್ ಸಡಿಲಿಕೆ ಆಗುತ್ತದೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು'' ಅಂತ ಮನವಿ ಮಾಡಿದರು.

''ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ. ಅದರಿಂದ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಮುಂದೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ಮಾಡುತ್ತೇವೆ'' ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಅಂದ್ಹಾಗೆ, ಹಾಸನದ ಜಿಲ್ಲಾ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂ ಗೌಡ ಉಪಸ್ಥಿತರಿದ್ದರು.












Click it and Unblock the Notifications