ಹಾಸನ: ಬೈಕ್ ಗೆ ಟ್ಯಾಂಕರ್ ಡಿಕ್ಕಿ, ದಂಪತಿ ಸಾವು
ಹಾಸನ, ಅಕ್ಟೋಬರ್ 20 : ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ಸಮೀಪದ ಆಲೂರು ಪಾಳ್ಯ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದುದ್ದ ಗ್ರಾಮದ ದಂಪತಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications