ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ವರ್ಷ ಭಕ್ತರಿಗೆ ಹಾಸನಾಂಬ ದೇವಿ ದರ್ಶನವಿಲ್ಲ?

|
Google Oneindia Kannada News

ಹಾಸನ, ಅಕ್ಟೋಬರ್ 02 : ಕೋವಿಡ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಈ ವರ್ಷ ಭಕ್ತರಿಗೆ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ಸಿಗುವುದಿಲ್ಲ?. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಸ್ತುತ ಒಟ್ಟು ಪ್ರಕರಣಗಳ ಸಂಖ್ಯೆ 17,248.

ಶುಕ್ರವಾರ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಈ ಬಾರಿ ನಡೆಯಲಿರುವ ಹಾಸನಾಂಬ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರಿಗೆ ದರ್ಶನ ನೀಡುವುದರ ಬಗ್ಗೆ ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು"ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಅನ್‌ಲಾಕ್ 5.0 ಮಾರ್ಗಸೂಚಿಯಲ್ಲಿ ಏನೇನಿದೆ?ರಾಜ್ಯ ಸರ್ಕಾರದ ಅನ್‌ಲಾಕ್ 5.0 ಮಾರ್ಗಸೂಚಿಯಲ್ಲಿ ಏನೇನಿದೆ?

ವರ್ಷದಲ್ಲಿ ಒಮ್ಮೆ ಮಾತ್ರ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಾಗುತ್ತದೆ. ದೇವರ ದರ್ಶನ ಪಡೆಯಲು ಹಾಸನ ಮಾತ್ರವಲ್ಲದೇ ಬೇರೆ-ಬೇರೆ ಜಿಲ್ಲೆಗಳಿಂದ, ರಾಜ್ಯದಿಂದ ಭಕ್ತರು ಆಗಮಿಸುತ್ತಾರೆ. ನೂರಾರು ಗಣ್ಯರು ಸಹ ಆಗಮಿಸುತ್ತಾರೆ.

ಹಾಸನಾಂಬೆ ಜಾತ್ರೆಗೆ ತೆರೆ; ಹುಂಡಿ ಕಾಣಿಕೆ ಸಂಗ್ರಹವೆಷ್ಟು? ಹಾಸನಾಂಬೆ ಜಾತ್ರೆಗೆ ತೆರೆ; ಹುಂಡಿ ಕಾಣಿಕೆ ಸಂಗ್ರಹವೆಷ್ಟು?

ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟವಾಗಲಿದೆ. ಆದ್ದರಿಂದ, ಭಕ್ತರಿಗೆ ಈ ಬಾರಿ ಪ್ರವೇಶ ನಿಷೇಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಹಾಸನಾಂಬೆ ದರ್ಶನ ಪಡೆದು ಪುನೀತರಾದ ಎಚ್.ಡಿ.ಕುಮಾರಸ್ವಾಮಿ ಹಾಸನಾಂಬೆ ದರ್ಶನ ಪಡೆದು ಪುನೀತರಾದ ಎಚ್.ಡಿ.ಕುಮಾರಸ್ವಾಮಿ

ನವೆಂಬರ್ 5 ರಿಂದ 17

ನವೆಂಬರ್ 5 ರಿಂದ 17

ಈ ವರ್ಷ ನವೆಂಬರ್ 5 ರಿಂದ 17ರ ತನಕ ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಹೆಚ್ಚು ಜನರು ಸೇರುವುದರಿಂದ ಉತ್ಸವ ಆಚರಣೆ ಮಾಡುವುದು ಕಷ್ಟವಾಗಲಿದೆ. ಆದ್ದರಿಂದ, ಭಕ್ತರ ಭೇಟಿಗೆ ಪ್ರವೇಶ ನೀಡುವ ಕುರಿತು ಚರ್ಚೆ ಆರಂಭವಾಗಿದೆ.

ಸಾಮಾಜಿಕ ಅಂತರ ಕಾಪಾಡುವುದು ಕಷ್ಟ

ಸಾಮಾಜಿಕ ಅಂತರ ಕಾಪಾಡುವುದು ಕಷ್ಟ

ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟವಾಗಲಿದೆ. ಲಕ್ಷಕ್ಕಿಂತ ಹೆಚ್ಚು ಜನರು ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಆದ್ದರಿಂದ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ

ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ

ಮೊದಲ, ಕೊನೆಯ ದಿನ ಮಾತ್ರ ಪ್ರತಿ ವರ್ಷದಂತೆ ವಿಧಿ ವಿಧಾನಗಳ ಪ್ರಕಾರ ಸಣ್ಣ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಉಳಿದ ದಿನಗಳಲ್ಲಿ ದೇವಾಲಯದ ಸಿಬ್ಬಂದಿಗಳು ಮಾತ್ರ ಪೂಜೆ ಪುನಸ್ಕಾರ ಮಾಡುತ್ತಾರೆ" ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ಹಾಸನಾಂಬೆ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ.

ಲೈವ್ ದರ್ಶನ ನೀಡಲು ಚಿಂತನೆ

ಲೈವ್ ದರ್ಶನ ನೀಡಲು ಚಿಂತನೆ

"ಆರಂಭದ ದಿನದಿಂದ ಅಂತ್ಯದವರೆಗೂ ದೇವರ ದರ್ಶನವನ್ನು ಸಾಮಾಜಿಕ ಅಂತರ ಕಾಪಾಡಿಕೊಂಡು ನಿರ್ವಹಣೆ ಮಾಡುವುದು ಕಷ್ಟ. ಕೆಲವು ಸ್ಥಳಗಳಲ್ಲಿ ಎಲ್.ಇ.ಡಿ. ಸ್ಕ್ರೀನ್ ಮೂಲಕ ಲೈವ್‍ನಲ್ಲಿ ದರ್ಶನ ನೀಡಲು ನಿರ್ಧರಿಸಲಾಗಿದೆ" ಎಂದು ಆರ್. ಗಿರೀಶ್ ತಿಳಿಸಿದ್ದಾರೆ.

Recommended Video

Robin Uthappa ಚೆಂಡಿಗೆ ಉಗುಳು ಹಚ್ಚಿದ ಚಿತ್ರ ವೈರಲ್ | Oneindia Kannada

English summary
Due to COVID-19 pandemic devotees will not allowed for Hassan district historical Hasanamba temple. Temple is opened for devotes only once in a year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X