ಹಾಸನಾಂಬ ಜಾತ್ರೆ; ದೇವಾಲಯಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಹಾಸನ, ಅಕ್ಟೋಬರ್ 28 : ಹಾಸನ ನಗರದ ಐತಿಹಾಸಿಕ ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಈ ವರ್ಷ ನವೆಂಬರ್ 5 ರಿಂದ 17ರ ತನಕ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದೆ.

ಬುಧವಾರ ಜಿಲ್ಲಾಧಿಕಾರಿ ಆರ್. ಗಿರೀಶ್ ದೇವಾಲಯಗಳಿಗೆ ಭೇಟಿ ನೀಡಿದರು. ಈ ಬಾರಿಯ ದರ್ಶನೋತ್ಸವದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಈ ಬಾರಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಹಾಸನ ನಗರದ ಅಧಿದೇವತೆ ಹಾಸನಾಂಬ ದೇವಾಲಯದಲ್ಲಿ ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು.

ಕೊರೋನಾ ಪರಿಸ್ಥಿತಿ ಹಿನ್ನಲೆಯಲ್ಲಿ ಭಕ್ತರಿಗೆ ದೇವಾಲಯದ ಒಳಗಡೆ ತೆರಳಿ ದೇವಿಯ ದರ್ಶನ ಮಾಡಲು ಅನುಮತಿ ನೀಡಿಲ್ಲ. ಎಲ್. ಇ. ಡಿ ಸ್ಕ್ರೀನ್‍ಗಳನ್ನು ದೇವಾಲಯದ ಆವರಣ ಹಾಗೂ ನಗರದ ಇತರೆ ಭಾಗಗಳಲ್ಲಿ ಅಳವಡಿಸಲಾಗುತ್ತಿದೆ. ಅಲ್ಲಿಯೇ ಭಕ್ತರು ದರ್ಶನ ಪಡೆಯಬಹುದಾಗಿದೆ.

ಭಕ್ತರು ದರ್ಶನಕ್ಕೆ ಅವಕಾಶವಿಲ್ಲ

ಭಕ್ತರು ದರ್ಶನಕ್ಕೆ ಅವಕಾಶವಿಲ್ಲ

ಈ ವರ್ಷದ ನವೆಂಬರ್ 5 ರಿಂದ 17ರ ತನಕ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಹೆಚ್ಚು ಜನರು ಸೇರುವುದರಿಂದ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದು ಕಷ್ಟವಾಗಲಿದೆ. ಆದ್ದರಿಂದ, ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಬ್ಯಾರಿಕೇಡ್ ಅಳವಡಿಕೆ

ಬ್ಯಾರಿಕೇಡ್ ಅಳವಡಿಕೆ

ಭಕ್ತರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನ ಸಂದಣಿಯಾದಂತೆ ಬ್ಯಾರಿಕೇಡ್‍ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ದೇವಾಲಯದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕ ಮುಖ ಸಂಚಾರ ವ್ಯವಸ್ಥೆ ಮಾಡುವಂತೆಯೂ ತಿಳಿಸಿದ್ದಾರೆ.

ಯಾವುದೇ ತೊಂದರೆ ಆಗಬಾರದು

ಯಾವುದೇ ತೊಂದರೆ ಆಗಬಾರದು

ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಕೋವಿಡ್ ನಿಯಮಗಳನ್ನು ಜೊತೆಯಲ್ಲಿಯೇ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Recommended Video

    Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada
    ಕಾಮಗಾರಿಗಳ ವೀಕ್ಷಣೆ

    ಕಾಮಗಾರಿಗಳ ವೀಕ್ಷಣೆ

    ಹಾಸನಾಂಬ ದೇವಾಲಯದ ಸುತ್ತಲಿನ ರಸ್ತೆ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು. ಹಾಸನ ನಗರಸಭೆ, ಲೋಕೋಪಯೋಗಿ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+