ಒಂದೇ ವಾರದಲ್ಲಿ ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ವರ್ಗಾವಣೆ

ಹಾಸನ, ಏಪ್ರಿಲ್ 24 : ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಏಪ್ರಿಲ್ 18ರಂದು ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಚುನಾವಣಾ ಆಯೋಗದ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ಅವರನ್ನು ಮಂಗಳವಾರ ವರ್ಗಾವಣೆ ಮಾಡಲಾಗಿದೆ. ರಣದೀಪ್ ಅವರ ಸ್ಥಾನಕ್ಕೆ ಪಿ.ಸಿ.ಜಾಫರ್ ಅವರನ್ನು ನೇಮಕ ಮಾಡಲಾಗಿದೆ.

2018ರ ಮಾರ್ಚ್ 7ರಂದು ಕರ್ನಾಟಕ ಸರ್ಕಾರ ಡಾ.ರಣದೀಪ್ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.

D Randeep

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶವನ್ನು ಸಿಎಟಿಯಲ್ಲಿ ಪ್ರಶ್ನಿಸಿದ್ದರು. ಸಿಎಟಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಇದರಿಂದಾಗಿ ಮೈಸೂರಿಗೆ ಹೊಸ ಜಿಲ್ಲಾಧಿಕಾರಿಗಳ ಆಗಮನವಾದರೂ ಡಾ.ರಣದೀಪ್ ಅವರು ಜಿಲ್ಲಾಧಿಕಾರಿಗಳ ವಸತಿ ಗೃಹವನ್ನು ಡಾ.ರಣದೀಪ್ ತೆರವು ಮಾಡಿರಲಿಲ್ಲ. ಏಪ್ರಿಲ್ 18ರಂದು ಕರ್ನಾಟಕ ಸರ್ಕಾರದ ಆದೇಶವನ್ನು ಸಿಎಟಿ ಎತ್ತಿ ಹಿಡಿದಿತ್ತು.

ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ಅಧಿಕಾರವಹಿಸಿಕೊಳ್ಳಬೇಕು ಎಂದು ಆದೇಶ ನೀಡಿತ್ತು. ಈ ಆದೇಶ ಬಂದ ಬಳಿಕ ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+