ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದೇ ವಾರದಲ್ಲಿ ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ವರ್ಗಾವಣೆ

|
Google Oneindia Kannada News

ಹಾಸನ, ಏಪ್ರಿಲ್ 24 : ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಏಪ್ರಿಲ್ 18ರಂದು ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಚುನಾವಣಾ ಆಯೋಗದ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಡಾ.ರಣದೀಪ್ ಅವರನ್ನು ಮಂಗಳವಾರ ವರ್ಗಾವಣೆ ಮಾಡಲಾಗಿದೆ. ರಣದೀಪ್ ಅವರ ಸ್ಥಾನಕ್ಕೆ ಪಿ.ಸಿ.ಜಾಫರ್ ಅವರನ್ನು ನೇಮಕ ಮಾಡಲಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ

2018ರ ಮಾರ್ಚ್ 7ರಂದು ಕರ್ನಾಟಕ ಸರ್ಕಾರ ಡಾ.ರಣದೀಪ್ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.

D Randeep

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶವನ್ನು ಸಿಎಟಿಯಲ್ಲಿ ಪ್ರಶ್ನಿಸಿದ್ದರು. ಸಿಎಟಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ

ಇದರಿಂದಾಗಿ ಮೈಸೂರಿಗೆ ಹೊಸ ಜಿಲ್ಲಾಧಿಕಾರಿಗಳ ಆಗಮನವಾದರೂ ಡಾ.ರಣದೀಪ್ ಅವರು ಜಿಲ್ಲಾಧಿಕಾರಿಗಳ ವಸತಿ ಗೃಹವನ್ನು ಡಾ.ರಣದೀಪ್ ತೆರವು ಮಾಡಿರಲಿಲ್ಲ. ಏಪ್ರಿಲ್ 18ರಂದು ಕರ್ನಾಟಕ ಸರ್ಕಾರದ ಆದೇಶವನ್ನು ಸಿಎಟಿ ಎತ್ತಿ ಹಿಡಿದಿತ್ತು.

ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ಅಧಿಕಾರವಹಿಸಿಕೊಳ್ಳಬೇಕು ಎಂದು ಆದೇಶ ನೀಡಿತ್ತು. ಈ ಆದೇಶ ಬಂದ ಬಳಿಕ ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು.

English summary
According to instructions by the Election Commission Hassan Deputy Commissioner D.Randeep transferred. D.Randeep took charge as DC on April 18, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X