ದೇವೇಗೌಡರ ಕುಟುಂಬದ ಕಣ್ಣೀರ ನಾಟಕ ಶುರು: ಬಿಜೆಪಿ ವ್ಯಂಗ್ಯ

ಬೆಂಗಳೂರು, ಮಾರ್ಚ್‌ 13: ದೇವೇಗೌಡ ಹಾಗೂ ಕುಟುಂಬದವರು ಇಂದು ಹೊಳೆನರಸೀಪುರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದನ್ನು ರಾಜ್ಯ ಬಿಜೆಪಿ ಅಣಕಿಸಿದೆ.

ಲೋಕಸಭೆ ಚುನಾವಣೆ ಪ್ರಾರಂಭವಾಗುತ್ತಿದ್ದಂತೆ ಮೊದಲ ನಾಟಕ ಪ್ರಾರಂಭವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ದೇವೇಗೌಡ ಅವರು ರೇವಣ್ಣ ಅವರು ಕಣ್ಣೀರು ಹಾಕುತ್ತಿರುವ ಚಿತ್ರವನ್ನು ಸಹ ಅದು ಪ್ರಕಟಿಸಿದೆ.

 Deve Gowda and Revanna family cries in rally: BJP trolls

ದೇವೇಗೌಡ ಹಾಗೂ ರೇವಣ್ಣ ಕುಟುಂಬದ ಕಣ್ಣೀರು ಕುರಿತು ಎರಡು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ, ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ, ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು, ರಾಜ್ಯದ ಜನ ಈಗಲೂ ಮರುಳಾಗುವರೇ ಎಂದು ಬಿಜೆಪಿ ಪ್ರಶ್ನಿಸಿದೆ.

ಇಂದು ಹೊಳೆನರಸೀಪುರದಲ್ಲಿ ನಡೆದ ಪ್ರಜ್ವಲ್ ರೇವಣ್ಣ ಅವರ ಪ್ರಚಾರ ಸಮಾವೇಶದಲ್ಲಿ, ದೇವೇಗೌಡ, ಎಚ್‌.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದರು. ಇವರ ಸಂಬಂಧಿ ಆದ ಶಾಸಕ ಎಚ್‌.ಸಿ.ಬಾಲಕೃಷ್ಣ ಸಹ ಕಣ್ಣೀರು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+