• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವೇಗೌಡರು ಹಾಸನದಿಂದ ಚುನಾವಣೆ ಸ್ಪರ್ಧಿಸಬೇಕಿತ್ತು: ಕುಮಾರಸ್ವಾಮಿ

|
   According to HD kumaraswamy What was the mistake of HDD | Oneindia Kannada

   ಹಾಸನ, ಅಕ್ಟೋಬರ್ 22: ದೇವೇಗೌಡ ಅವರು ತುಮಕೂರಿನ ಬದಲು ಹಾಸನದಿಂದ ಚುನಾವಣೆ ಸ್ಪರ್ಧಿಸಬೇಕಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

   ಹಾಸನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡ ಅವರು ತುಮಕೂರಿನಿಂದ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ತಪ್ಪು ಮಾಡಿದರು' ಎಂದರು.

   ಕುಮಾರಸ್ವಾಮಿ ಮನೆ ಮೇಲೆ ದಾಳಿಯಾದ್ರೆ ಯಡಿಯೂರಪ್ಪ ಗೆ ಸಮಸ್ಯೆ!ಕುಮಾರಸ್ವಾಮಿ ಮನೆ ಮೇಲೆ ದಾಳಿಯಾದ್ರೆ ಯಡಿಯೂರಪ್ಪ ಗೆ ಸಮಸ್ಯೆ!

   ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದ ದೇವೇಗೌಡ ಅವರು ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು.

   ಹಾಸನದಿಂದ ಬಹುಕಾಲ ಸ್ಪರ್ಧಿಸಿ ಗೆದ್ದಿದ್ದ ದೇವೇಗೌಡ ಅವರು ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದರು. ಪ್ರಜ್ವಲ್ ರೇವಣ್ಣ ಅವರು ಹಾಸನದಲ್ಲಿ ಗೆದ್ದು ಸಂಸದರಾಗಿದ್ದಾರೆ.

   ಕುಮಾರಸ್ವಾಮಿ ಸೌಜನ್ಯಕ್ಕೂ ಮಾತನಾಡಿಸಲಿಲ್ಲ: ಹೊರಟ್ಟಿ ಬೇಸರಕುಮಾರಸ್ವಾಮಿ ಸೌಜನ್ಯಕ್ಕೂ ಮಾತನಾಡಿಸಲಿಲ್ಲ: ಹೊರಟ್ಟಿ ಬೇಸರ

   ತುಮಕೂರಿನಲ್ಲಿ ದೇವೇಗೌಡ ಅವರು ಸೋತಿದ್ದಕ್ಕೆ ಕಾಂಗ್ರೆಸ್ ಕಾರಣ ಎಂಬ ಮಾತನ್ನು ಈ ಮುಂಚೆ ಕುಮಾರಸ್ವಾಮಿ ಹೇಳಿದ್ದರು. ದೇವೇಗೌಡ ಅವರೂ ಸಹ ತುಮಕೂರಿನ ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಿದ್ದರು.

   English summary
   Former CM Kumaraswamy said Deve Gowda must have been contested from Hassan not Tumkuru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X