ಹಾಸನ: ದೇವೇಗೌಡ ಅವರ ಅತ್ತೆ ಕಾಳಮ್ಮ ವಿಧಿವಶ
ಹಾಸನ, ಜನವರಿ 04: ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರ ಅವರ ಅತ್ತೆ ನಿಧನವಾಗಿದ್ದಾರೆ.
ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಾಯಿ ಕಾಳಮ್ಮ ಅವರು ಇತ್ತೀಚೆಗೆ ತೀರ್ವ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಸೇರಿಸಲಾಗಿತ್ತು, ನಂತರ ಹಾಸನದ ತಮ್ಮ ಸ್ವಗೃಹದಲ್ಲಿ ವಿಶ್ರಾಂತಿಯಲ್ಲಿದ್ದರು, ಅವರು ಇಂದು ಬೆಳಿಗ್ಗೆ ಕೊನೆ ಉಸಿರೆಳೆದಿದ್ದಾರೆ.
ಕಾಳಮ್ಮ ಅವರಿಗೆ ನೂರಕ್ಕೂ ಹೆಚ್ಚು ವಯಸ್ಸಾಗಿತ್ತು, ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಹೊಳೆನರಸೀಪುರ ತಾಲ್ಲೂಕು ಮುತ್ತಿಗೆ ಹಿರಿಯಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ದೇವೇಗೌಡ, ಚೆನ್ನಮ್ಮ ದೇವೇಗೌಡ ಅವರುಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ, ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕೂಡ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.












Click it and Unblock the Notifications