Breaking: ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಹಾಸನ, ಅಕ್ಟೋಬರ್ 20: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಹಾಸನ ತಾಲ್ಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43)ಎಂಬುವವರೇ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನದ ಪೆನ್ಸನ್‌ ಮೊಹಲ್ಲಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಿರೀಶ್‌ ಶವವನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

Devotee Dies of Heart attack in Hasanamba Temple

ಇನ್ನು ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ ಇರುವುದರಿಂದ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರೋ ಹಿನ್ನೆಲೆಯಲ್ಲಿ ದರ್ಶನ ಅವಧಿ ವಿಸ್ತರಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆ ವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಸ್ತುವಾರಿ ಸಚಿವರ ಸೂಚನೆ ಹಿನ್ನೆಲೆಯಲ್ಲಿ ದರ್ಶನ ಅವಧಿ ವಿಸ್ತರಣೆ ಮಾಡಲಾಗಿದೆ.ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಹಾಸನಾಂಬೆ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ವರ್ಷ ಕೊರೊನಾ ಆತಂಕ ಇಲ್ಲದ್ದರಿಂದ ಭಾರಿ ಸಂಖ್ಯೆಯಲ್ಲಿ ಭಕ್ತರ ದಂಡು ಹೆಚ್ಚಾಗುತ್ತಿದೆ.

ಹರಿದು ಬರುತ್ತಿರುವ ಲಕ್ಷಗಟ್ಟಲೆ ಆದಾಯ
ಹಾಸನಾಂಬೆಯ ದರ್ಶನ ಪ್ರಾರಂಭವಾಗಿ ಇಂದಿಗೆ 8 ದಿನಗಳಾಗಿದ್ದು, ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ದೇಗುಲಕ್ಕೆ ಲಕ್ಷಗಟ್ಟಲೆ ಆದಾಯ ಹರಿದು ಬರುತ್ತಿದೆ. 5 ದಿನದಲ್ಲಿ 1 ಸಾವಿರ ಮತ್ತು 300 ರೂ.ಗಳ ಟಿಕೆಟ್‌ಗಳು ಮತ್ತು ಲಡ್ಡು ಮಾರಾಟದಿಂದ 50.56 ಲಕ್ಷ ರೂ. ಹಣ ದೇವಾಲಯಕ್ಕೆ ಸಂಗ್ರಹವಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅ. 14ರಂದು 9.88ಲಕ್ಷ ರೂ, 15ರಂದು 9.01 ಲಕ್ಷ ರೂ, 16 ರಂದು 23.88 ಲಕ್ಷ ರೂ, 17 ರಂದು 7.81 ಲಕ್ಷ ರೂ,18 ರಂದು 9.96 ಲಕ್ಷ ರೂ.ಗಳು ಕೇವಲ ಟಿಕೆಟ್ ಮತ್ತು ಲಡ್ಡು ಮಾರಾಟದಿಂದ ಸಂಗ್ರಹವಾಗಿದೆ. ಮುಂದಿನ ದಿನಗಳು ರಜೆ ಇರುವುದರಿಂದ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಇನ್ನೂ ದೇವಾಲಯಕ್ಕೆ ಲಕ್ಷ ಲಕ್ಷಗಟ್ಟಲೆ ಹಣ ಸಂದಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+