• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆನ್ ಲೈನ್‌ನಲ್ಲಿಯೇ ಹಾಸನಾಂಬೆ ದೇವಿಯ ದರ್ಶನ ಪಡೆಯಿರಿ

|

ಹಾಸನ, ನವೆಂಬರ್ 05 : ಹಾಸನ ನಗರದ ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಗುರುವಾರ ಮಧ್ಯಾಹ್ನ ತೆರೆಯಲಾಗುತ್ತದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಭಕ್ತರಿಗೆ ಈ ಬಾರಿಯ ಪ್ರವೇಶ ನಿಷೇಧಿಸಲಾಗಿದೆ.

ಗುರುವಾರ 1.30ರ ಸುಮಾರಿಗೆ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ನವೆಂಬರ್ 5ರಿಂದ 17ರ ತನಕ ಈ ಬಾರಿ ದೇವಾಲಯ ಬಾಗಿಲು ತೆರೆದಿರುತ್ತದೆ. ಈಗಾಗಲೇ ಜಿಲ್ಲಾಡಳಿತ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ದೇವಾಲಯಕ್ಕೆ ಕಳಿಸಿದೆ.

ಹಾಸನಾಂಬ ಜಾತ್ರೆ; ದೇವಾಲಯಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಿಯ ದರ್ಶನಕ್ಕೆ ದೇವಾಲಯಕ್ಕೆ ಬರುವಂತಿಲ್ಲ. ಆನ್‌ಲೈನ್ ಮೂಲಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಸನ ನಗರದ 10 ಕಡೆ ಎಲ್‌ಇಡಿ ಪರದೆ ಅಳವಡಿಕೆ ಮಾಡಿದ್ದು, ಅಲ್ಲಿ ಭಕ್ತರು ದೇವಿಯ ದರ್ಶನ ಪಡೆಯಬಹುದು.

ಹಾಸನಾಂಬೆ ದರ್ಶನಕ್ಕೆ ದಿನಾಂಕ ನಿಗದಿ; ಆದರೆ ಭಕ್ತರಿಗೆ ನೋ ಎಂಟ್ರಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ದೇವಿಯ ಭಕ್ತರು http://hasanambalive2020.com/Home.aspx ಲಿಂಕ್ ಮೂಲಕ ದೇವಾಲಯದ ಪೂಜೆ, ದರ್ಶನವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವರ್ಷ ಭಕ್ತರಿಗೆ ಹಾಸನಾಂಬ ದೇವಿ ದರ್ಶನವಿಲ್ಲ

"ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೊದಲ ದಿನ ಮತ್ತು ಕೊನೆಯ ದಿನ ಜನಪ್ರತಿನಿಧಿಗಳು, ವಿಶೇಷ ಗಣ್ಯರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ" ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದ್ದಾರೆ.

ಹಾಸನಾಂಬೆ ಜಾತ್ರೆಯ ಅಂಗವಾಗಿ ನಗರದಲ್ಲಿ ಹಲವಾರು ವ್ಯವಸ್ಥೆಗಳನ್ನು ಮಾಡಲಾಗಿದೆ. ವರ್ಷಕ್ಕೊಮ್ಮೆ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಆದರೆ, ಕೋವಿಡ್ ಪರಿಸ್ಥಿತಿ ಕಾರಣ ಭಕ್ತರಿಗೆ ಈ ಬಾರಿ ದರ್ಶನ ಇಲ್ಲವಾಗಿದೆ.

   Hindu ಭಾವನೆಗಳನ್ನು ಘಾಸಿಗೊಳಿಸಿದ್ರಾ Amithabh bachan | KBC | Oneindia Kannada

   ಬುಧವಾರದ ವರದಿಯಂತೆ ಹಾಸನ ಜಿಲ್ಲೆಯಲ್ಲಿ 172 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 25,473. ಸಕ್ರಿಯ ಪ್ರಕರಣಗಳ ಸಂಖ್ಯೆ 1290.

   English summary
   Hassan district historical Hasanamba temple will open on November 5, 2020. Due to COVID devotees entry to temple banned. People can take darshana online.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X