ಸಕಲೇಶಪುರ: ಕಾಂಗ್ರೆಸ್ಸಿನಿಂದ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಕಣಕ್ಕೆ?

Posted By:
Subscribe to Oneindia Kannada

ಹಾಸನ, ಏಪ್ರಿಲ್ 11: ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ಸಿನಲ್ಲಿ ಭಾರಿ ಚರ್ಚೆ ನಡೆದಿದೆ.

ಈ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯ ಕೊರತೆ ಎದುರಾಗಿರುವುದರಿಂದ ಸಿದ್ದಯ್ಯ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು ಜೆ.ಎಚ್ ಪಟೇಲ್, ಯಡಿಯೂರಪ್ಪ ಹಾಗೂ ಧರ್ಮಸಿಂಗ್ ಅವರ ಆಡಳಿತಾವಧಿಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಹೆಸರು ಪ್ರಸ್ತಾಪಿಸಿದ ಡಿಕೆ ಶಿವಕುಮಾರ್

ಸಿದ್ದಯ್ಯ ಅವರ ಹೆಸರನ್ನು ಕೆ.ಪಿ.ಸಿ. ಸಿ ಅಧ್ಯಕ್ಷ ಜಿ ಪರಮೇಶ್ವರ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಈ ಪ್ರಸ್ತಾವನೆ ಮುಂದಿಟ್ಟಿದ್ದು, ಸ್ಕ್ರೀನಿಂಗ್ ಕಮಿಟಿಗೂ ಶಿಫಾರಸು ತಲುಪಿದೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಗಲಿದೆ ಎಂಬ ಸುದ್ದಿಯಿದೆ.

Elections 2018 : Sakleshpur Retired IAS Officer Siddaiah likely to contest from Congress

ಆಲೂರು -ಸಕಲೇಶಪುರ ವಿಧಾನಸಭಾ ಕ್ಷೇತ್ರಲ್ಲಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಹಿಂದಿನಿಂದ ಚರ್ಚೆ ನಡೆಯುತ್ತಲೇ ಇದೆ ಕಳೆದ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸಲು ಆಫರ್ ಪಡೆದ ಹಿರಿಯ ಕಾಂಗ್ರೆಸ್ಸಿಗರಿಗೆ ಈಗ ಕೂಡಾ ಆಹ್ವಾನ ಕಳಿಸಲಾಗಿತ್ತು.

ಸಕಲೇಶಪುರ : ಕೃಷಿ, ಸಂಶೋಧನಾ ಪ್ರಧಾನ ಕ್ಷೇತ್ರ

ಸಚಿವ ಎಚ್. ಸಿ ಮಹದೇವಪ್ಪ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಮೋಟಮ್ಮ ಮೂವರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಕೋರಿದ್ದರು.

ಸಕಲೇಶಪುರದಲ್ಲಿ ಬಿಜೆಪಿ vs ಕಾಂಗ್ರೆಸ್ ಬಾಡೂಟದ 'ಪಾರ್ಟಿ ಪಾಲಿಟಿಕ್ಸ್'

ಕನಕಪುರ ತಾಲೂಕಿನ ಹಾರೋಹಳ್ಳಿ ಗ್ರಾಮದ ಸಿದ್ದಯ್ಯ ಅವರು ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಆಕ್ರಮ ಆಸ್ತಿ ಗಳಿಕೆ ಆರೋಪ ಹೊತ್ತಿದ್ದರೂ, ನಂತರ ಲೋಕಾಯುಕ್ತ ಕೋರ್ಟಿನಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದರು. ಸದ್ಯ ಈ ಕ್ಷೇತ್ರದಲ್ಲಿ ಮಾಜಿ ಶಾಸಕ ಡಿ ಮಲ್ಲೇಶ್, ಕೆಲವತ್ತಿ ಸೋಮಶೇಖರ್ ಸೇರಿದಂತೆ 17ಕ್ಕೂ ಅಧಿಕ ಮಂದಿ ಆಕಾಂಕ್ಷಿಗಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Elections 2018 : Retired IAS Officer Siddaiah likely to ticket from Alur-Sakleshpur constituency. KPCC president G Parameshwara and campaign committee chief DK Shivakumar are very keen to field Siddaiah.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ