ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಉಪಟಳ
ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೆಳ್ಳಂಬೆಳಿಗ್ಗೆ ಗ್ರಾಮಗಳ ಒಳಗೆ ಒಂಟಿ ಸಲಗಗಳು ಏಕಾಏಕಿ ಪ್ರವೇಶ ಮಾಡಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿವೆ.
ಸಕಲೇಶಪುರ ತಾಲ್ಲೂಕಿನ ಕಿರುಹುಣಸೆ ಸರ್ಕಲ್ ಹಾಗೂ ವಡೂರು ಗ್ರಾಮದಲ್ಲಿ ಹಾದು ಹೋದ ಗಜ ಕಾಡಾನೆ ಕಂಡು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಕಾಡಾನೆಯೊಂದು ರಸ್ತೆಯಲ್ಲಿ ದಿಢೀರನೆ ಎದುರು ಬರುತ್ತಿದ್ದಂತೆ ಬೈಕ್ ನಿಲ್ಲಿಸಿ ಸವಾರರೊಬ್ಬರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ.
ಕಿರುಹುಣಸೆ ಗ್ರಾಮದೊಳಗೆ ಎರಡು ಸಲಗಗಳು ಸಂಚಾರ ಮಾಡುವ ವಿಡಿಯೋ ವೈರಲ್ ಇದೀಗ ವೈರಲ್ ಆಗಿದ್ದು, ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಯಾವಾಗ ನಮ್ಮ ಮೇಲೆ ದಾಳಿ ಮಾಡುತ್ತವೆಯೋ ಎಂದು ಆತಂಕ ಗ್ರಾಮದಲ್ಲಿ ಮನೆ ಮಾಡಿದೆ.

ಆನೆಗಳ ಉಪಟಳ ಜಾಸ್ತಿಯಾಗುತ್ತಿದಂತೆ ಇಂದು ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಒತ್ತಾಯಿಸಿ ಶಾಸಕ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇನ್ನೊಂದೆಡೆ ಕಾಡಾನೆಗಳ ಇರುವ ಮಾಹಿತಿ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದು, ಜನರಿಗೆ ಹೊರ ಬಾರದಂತೆ ಸೂಚನೆ ನೀಡಲಾಗಿದೆ. ಮಠಸಾಗರ, ಟಾಟಾ ಎಸ್ಟೇಟ್ ಬಳಿ ಕಾಡಾನೆಗಳಿದ್ದು ಜನರು ಸುರಕ್ಷಿತವಾಗಿ ಹಾಗೂ ಎಚ್ಚರಿಕೆಯಿಂದ ಓಡಾಡುವಂತೆ ಧ್ವನಿವರ್ಧಕದ ಮೂಲಕ ಮನವಿ ಮಾಡಲಾಗುತ್ತಿದೆ.
Recommended Video
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications