ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಜ್ವಲ್ ರೇವಣ್ಣ ಸುಳ್ಳು ಅಫಿಡೆವಿಟ್ ವಿವಾದ; ಹಾಸನ ಡಿಸಿಗೆ ಆಯೋಗದ ಪತ್ರ

|
Google Oneindia Kannada News

ಹಾಸನ, ಸೆಪ್ಟೆಂಬರ್ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೋಕಸಭೆ ಚುನಾವಣೆ ವೇಳೆ ಸುಳ್ಳು ಅಫಿಡೆವಿಟ್ ಸಲ್ಲಿಕೆ ಮಾಡಿದ್ದಾರೆ ಎಂಬ ಆರೋಪವಿದೆ. ಕೇಂದ್ರ ಚುನಾವಣಾ ಆಯೋಗ ಈ ಕುರಿತು ಹಾಸನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.

Recommended Video

ಕೊನೆಗೂ ಅಖಾಡಕ್ಕೆ ಧುಮುಕಿದ Dhoni Boys | Oneindia Kannada

ಪ್ರಜ್ವಲ್ ರೇವಣ್ಣ ಸುಳ್ಳು ಅಫಿಡೆವಿಡ್ ಸಲ್ಲಿಸಿದ್ದಾರೆ ಎಂಬ ಆರೋಪದ ಬಗ್ಗೆ ಒಂದು ವಾರದಲ್ಲಿ ವರದಿ ನೀಡಬೇಕು ಎಂದು ಚುನಾವಣಾ ಆಯೋಗ ಹಾಸನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿ ಎ. ಮಂಜು ಕಾನೂನು ಹೋರಾಟ ಮಾಡುತ್ತಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಜಯ; ಎ. ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಜಯ; ಎ. ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಎ. ಮಂಜು ಸಲ್ಲಿಸಿದ್ದ ಅರ್ಜಿ ತಿರಸ್ಕಾರವಾಗಿತ್ತು. ಈಗ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ.

ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟಿನಿಂದ ನೋಟಿಸ್ ಏಕೆ?ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟಿನಿಂದ ನೋಟಿಸ್ ಏಕೆ?

Fake Affidavit Case Trouble For Hassan MP Prajwal Revanna

ಎ. ಮಂಜು ಅವರು ಕೇಂದ್ರ ಚುನಾವಣಾ ಆಯೋಗಕ್ಕೂ ಈ ಕುರಿತು ಪತ್ರ ಬರೆದಿದ್ದರು. ಗುರುವಾರ ಚುನಾವಣಾ ಆಯೋಗ ಈ ಕುರಿತು ವರದಿ ನೀಡುವಂತೆ ಹಾಸನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಜಿಲ್ಲಾಧಿಕಾರಿಗಳು ಕೊಡುವ ವರದಿ ಕುತೂಹಲಕ್ಕೆ ಕಾರಣವಾಗಿದೆ.

ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣಗೆ ಸಿಹಿ ಸುದ್ದಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣಗೆ ಸಿಹಿ ಸುದ್ದಿ

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿದ್ದರು. ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಕರ್ನಾಟಕದಲ್ಲಿ ಜೆಡಿಎಸ್‌ನಿಂದ ಲೋಕಸಭೆಗೆ ಆಯ್ಕೆಯಾದ ಏಕೈಕ ಸಂಸದರು.

ಆರೋಪವೇನು?: ಸಂಸದ ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿಗಳಿಸಿದ್ದಾರೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಚುನಾವಣೆ ವೇಳೆ ನಾಮಪತ್ರ ಸಲ್ಲಿಸುವಾಗ ಇವುಗಳ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂಬುದು ಆರೋಪವಾಗಿದೆ.

English summary
Election commission directed Hassan DC to submit report on the issue of Hassan MP and JD(S) leader Prajwal Revanna submitted fake affidavit during the 2019 lok sabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X