ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲು

ಹಾಸನ, ಡಿಸೆಂಬರ್ 06: ಹಾಸನದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು, ಮುಖಂಡರ ನಡುವೆ ದ್ವೇಷ ರಾಜಕಾರಣ ಮೇರೆ ಮೀರಿ ಕೈ-ಕೈ ಮಿಲಾಯಿಸುವ ಹಂತಕ್ಕೆ ಮುಟ್ಟಿದೆ.

ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ತೋಟದ ಮನೆಯೊಂದಕ್ಕೆ ನುಗ್ಗಿ ಬಿಜೆಪಿ ಕಾರ್ಯಕರ್ತರು ಮತ್ತು ಬಿಬಿಎಂಪಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ್ದರು.

ಇದಾದ ನಂತರ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಜೆಡಿಎಸ್‌ ಕಾರ್ಯಕರ್ತರನ್ನು ತಡೆದು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.

FIR Lodged Against Hassan BJP MLA Preetham Gowda

ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ನಂತರದ ದಿನವೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಶಾಸಕ ಪ್ರೀತಂಗೌಡ ಅವರು ಜೆಡಿಎಸ್ ನ ಕೆಲವು ಕಾರ್ಯಕರ್ತರನ್ನು ತಡೆದು ಹಲ್ಲೆ ನಡೆಸಿ, ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪ್ರಭಾಕರ್ ಎಂಬ ಜೆಡಿಎಸ್ ಕಾರ್ಯಕರ್ತ ಪೊಲೀಸ್ ಠಾಣೆಯಲ್ಲಿ ಪ್ರೀತಂಗೌಡ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸೆಂಬರ್ 3 ರಂದು ಜೆಡಿಎಸ್‌ನ ಕೆಲವು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+