ಮಾಜಿ ಸಚಿವ ಕೆ.ಎಚ್.ಹನುಮೇಗೌಡ ವಿಧಿವಶ
ಹಾಸನ, ಮೇ 14 : ಮಾಜಿ ಸಚಿವ ಕೆ.ಎಚ್.ಹನುಮೇಗೌಡ ಅವರು ವಿಧಿವಶರಾಗಿದ್ದಾರೆ. ಎಂ.ವೀರಪ್ಪ ಮೊಯ್ಲಿ ಅವರ ಸರ್ಕಾರದಲ್ಲಿ ಹನುಮೇಗೌಡ ಅವರು ಸಚಿವರಾಗಿದ್ದರು.
ಹಾಸನದ ಸಂಜೀವಿನಿ ಸಹಕಾರಿ ಆಸ್ಪತ್ರೆಯಲ್ಲಿ ಕೆ.ಎಚ್.ಹನುಮೇಗೌಡ (89) ಅವರು ಭಾನುವಾರ ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹನುಮೇಗೌಡ ಅವರು 1972ರಲ್ಲಿ ಹಾಸನ ಕ್ಷೇತ್ರದಿಂದ ಸಂಸ್ಥಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯಗಳಿಸಿದ್ದರು. 1978ರಲ್ಲಿ ಕಾಂಗ್ರೆಸ್ ಐ, 1989ರಲ್ಲಿ ಕಾಂಗ್ರೆಸ್, 1999ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

1994ರಲ್ಲಿ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಹಾಸನದ ಕುವೆಂಪು ನಗರದ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಯ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಕೆ.ಎಚ್.ಹನುಮೇಗೌಡ ಅವರು ಹಾಸನ ತಾಲೂಕಿನ ಕೆ.ಬ್ಯಾಡರಹಳ್ಳಿಯವರು. ಹಾಸನ ಸಂಸದ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಡು ವಿರೋಧಿಯಾಗಿದ್ದರು.












Click it and Unblock the Notifications