ಹಾಸನ ಅಥವಾ ಮಂಡ್ಯ ಕಾಂಗ್ರೆಸ್‌ಗೆ ಬಿಟ್ಟುಕೊಡಿ: ಎ. ಮಂಜು ಪಟ್ಟು
ಹಾಸನ, ಜು.28: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ ಇಲ್ಲವೇ ಹಾಸನ ಕ್ಷೇತ್ರಗಳಲ್ಲಿ ಯಾವುದಾದರೂ ಒಂದನ್ನು ಆರಿಸಿಕೊಳ್ಳಲಿ, ಹಾಸನದಲ್ಲಿ ಜೆಡಿಎಸ್ ಸ್ಪರ್ಧಿಸಿದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಿ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿ ವಿಚಾರ ಕುರಿತು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಥವಾ ಹಾಸನ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಒಂದನ್ನು ಆರಿಸಿಕೊಳ್ಳಲಿ, ಹಾಸನದಲ್ಲಿ ಜೆಡಿಎಸ್ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್‌ಗೆ ಬಿಟ್ಟುಕೊಡಲಿ, ಪಕ್ಷದ ಕಾರ್ಯಕರ್ತರ ಹಿತದೃಷ್ಟಿಯಿಂದ ಹೀಗೆ ಹೇಳಿದ್ದೇನೆ ಎಂದರು.
ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಇವರಿಗೆ ಪಾಲು ಬೇಕು, ಅದೇ ರೀತಿ ಕಾಂಗ್ರೆಸ್ ಜೊತೆ ಸ್ಥಳೀಯ ಸಂಸ್ಥೆಗಳಲ್ಲೂ ಹೊಂದಾಣಿಕೆ ಮಾಡಿಕೊಳ್ಳಲಿ, ಈಗ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಇದೆ, ಯಾಕೆ ಹೋಗೆ ಎಲ್ಲಾ ಕಡೆಯೂ ಜೆಡಿಎಸ್ ಒಂದೇ ರೀತಿ ಇರಬೇಕು. ಅಲ್ಲೊಂದು ಇಲ್ಲೊಂದು ರೀತಿ ಎನ್ನುವಂತಾಗಬಾರದು.

ಹೀಗೆ ಮಾಡುವುದರಿಂದ ಕಾರ್ಯಕರ್ತರಿಗೆ ದ್ರೋಹ ಮಾಡಿದಂತಾಗುತ್ತದೆ, ನಾನು ಬಿಜೆಪಿಗೆ ಹೋಗುತ್ತೇನೆ ಎನ್ನುವುದೆಲ್ಲವೂ ಸುಳ್ಳು ಸೃಷ್ಟಿ, ಅಷ್ಟಕ್ಕೂ ನಾನೇಕೆ ಬಿಜೆಪಿಗೆ ಹೋಗಲಿ ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications