• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮದುವೆಗೆ 200ಕ್ಕೂ ಹೆಚ್ಚು ಮಂದಿ ಸೇರುವಂತಿಲ್ಲ

|

ಹಾಸನ, ನವೆಂಬರ್ 20: ಹಾಸನ ಜಿಲ್ಲೆಯಲ್ಲಿ ಶುಕ್ರವಾರ 28 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 26,627ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಸೂಚನೆಯೊಂದನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಅನ್‍ ಲಾಕ್ 5.0 ಮಾರ್ಗಸೂಚಿ ಅನ್ವಯ ಈ ಸೂಚನೆ ನೀಡಲಾಗಿದೆ.

ಕರ್ನಾಟಕ; 1781 ಹೊಸ ಕೋವಿಡ್ ಪ್ರಕರಣ ಪತ್ತೆ

"ಹಾಸನ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುವಂತಿಲ್ಲ" ಎಂದು ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.

ಕೋವಿಡ್; ಖಾಸಗಿ ಆಸ್ಪತ್ರೆ ಹಾಸಿಗೆ ಬಳಕೆ ನಿಯಮ ಬದಲು

"ಜಿಲ್ಲೆಯ ಕಲ್ಯಾಣ ಮಂಟಪ ಹಾಗೂ ಹೋಟೆಲ್‍ಗಳಲ್ಲಿ ವಿವಾಹ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುತ್ತಿರುವುದು ಗಮನಕ್ಕೆ ಬಂದಿದೆ" ಎಂದು ಹೇಳಿದ್ದಾರೆ.

ಶಿವಮೊಗ್ಗ; ಕೋವಿಡ್ ತಪಾಸಣಾ ಫಲಿತಾಂಶ ವೆಬ್ ಸೈಟ್ ನಲ್ಲಿ...

ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈ ತೊಳೆಯುವುದು ಕಡ್ಡಾಯವಾಗಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡದಿರುವುದು ಕಂಡುಬಂದಲ್ಲಿ ಅಂತಹ ಹೋಟೆಲ್ ಅಥವಾ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

   Amit Shah ಬೇಡದಿರೋ ಕಾರಣಕ್ಕೆ Twitterನಲ್ಲಿ ಟ್ರೆಂಡಿಂಗ್ | Oneindia Kannada

   ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹಾಸನದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 514.

   English summary
   Gathering of more than 200 people for marriage and other function prohibited in Hassan district. Hassan district total COVID cases 26,627.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X