ನಿಮಗಾಗಿ ದೇವರು ನನಗೆ ಪುನರ್ಜನ್ಮ ನೀಡಿದ್ದಾನೆ: ಎಚ್ ಡಿ ಕುಮಾರಸ್ವಾಮಿ

Recommended Video

      ಎಚ್ ಡಿ ಕುಮಾರಸ್ವಾಮಿಗೆ ದೇವರು ಪುನರ್ಜನ್ಮ ಕೊಟ್ಟಿದ್ದು ಜನಸೇವೆಗಾಗಿ ಎಂದಿದ್ದಾರೆ | Oneindia Kannada

      ಹಾಸನ ಸೆಪ್ಟೆಂಬರ್ 23: 'ಜನಸಾಮಾನ್ಯರ ನೋವುಗಳನ್ನು ದೂರ ಮಾಡಲು ದೇವರು ತಮಗೆ ಪುನರ್ಜನ್ಮ ನೀಡಿ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದ್ದಾನೆ. ರೈತ ಕುಟುಂಬಗಳು ದುಡುಕಿ ಪ್ರಾಣ ಕಳೆದು ಕೊಳ್ಳಬೇಡಿ ತಾಳ್ಮೆ ವಹಿಸಿ' ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ

      ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 1650 ಕೋಟಿ ರೂಪಾಯಿ ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಬಡವರು, ರೈತರು ಸಂಕಷ್ಟಗಳನ್ನು ತೀರಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದು ಸ್ವಲ್ಪ ಸಮಾಧಾನದಿಂದ ಕಾಯುವಂತೆ ತಿಳಿಸಿದರು .

      ರಾಜ್ಯದಲ್ಲಿ 44 ಲಕ್ಷ ರೈತ ಕುಟುಂಬಗಳು ಮಾಡಿದ್ದ 40 ಸಾವಿರ ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಲಾಗಿದೆ . ಖಾಸಗಿ ಲೇವಾದೇವಿ ದಾರ ಅಕ್ರಮ ಬಡ್ಡಿ ವಸೂಲಾತಿಗೂ ಶೀಘ್ರದಲ್ಲೇ ಕಡಿವಾಣ ಬೀಳಲಿದ್ದು ಯಾರು ಅಂಜುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಕರೆ ನೀಡಿದರು.

      ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ವಿರೋಧಪಕ್ಷಗಳ ಟೀಕೆಗೆ ತಮ್ಮ ಕಾರ್ಯಕ್ರಮಗಳೆ ಉತ್ತರ ನೀಡುತ್ತಿವೆ. ರಾಜ್ಯದ ಸಮಗ್ರ ಅಭಿವೃದ್ಧಿ ಸರ್ಕಾರದ ಗುರಿ. ಜನರ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಕೈಯಲ್ಲಿ ಸಾಧ್ಯವಾಗದೇ ಇದ್ದ ಸಂದರ್ಭದಲ್ಲಿ ಆ ಕ್ಷಣವೇ ಅಧಿಕಾರದಿಂದ ನಿರ್ಗಮಿಸಲು ಸಿದ್ಧ ಯಾರಿಂದಲೂ ದಬ್ಬಿಸಿಕೊಂಡು ಹೋಗುವ ಜಾಯಮಾನ ತಮ್ಮದಲ್ಲ ಎಂದರು.

      ಹುಸಿ ಆರೋಪ ತರವಲ್ಲ!

      ಹುಸಿ ಆರೋಪ ತರವಲ್ಲ!

      ಹುಸಿ ಆರೋಪಗಳಿಂದ ತಮ್ಮ ನೈಜ, ಜನಪರ ಕಾಳಜಿಯನ್ನು ಮರೆಮಾಚಲು ಸಾಧ್ಯವಿಲ್ಲ ಎಂದ ಅವರು ಹಿಂದಿನ ಸರ್ಕಾರದ ಯೋಜನೆಗಳನ್ನು ಮುಂದುವರಿಸಿ ಹತ್ತಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ . ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಡಿಸೆಲ್, ಪೆಟ್ರೋಲ್ ದರ ಕಡಿಮೆ ಇದೆ .ಎಲ್ಲಾ ಆರ್ಥಿಕ ಇತಿ ಮಿತಿಗಳನಡುವೆ ರೈತರ ಸಾಲ ಮನ್ನಾ ಮಾಡಿದ್ದು ಮುಂಬರುವ ಜುಲೈ ತಿಂಗಳೊಳಗಾಗಿ ರಾಷ್ಟ್ರೀಯ ಬ್ಯಾಂಕ್ ಗಳ ಸುಸ್ತಿ ಸಾಲ ತೀರುವಳಿಯಾಗಲಿದೆ ಎಂದರು. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಠಿ,ಉದ್ಯಮಗಳ ಸ್ಥಾಪನೆಗೆ ಸರ್ಕಾರ ಗಮನ ಹರಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

      ನೆಲದ ಜನರ ಋಣ ತೀರಿಸುತ್ತೇನೆ

      ನೆಲದ ಜನರ ಋಣ ತೀರಿಸುತ್ತೇನೆ

      ಕಳೆದ ಹತ್ತು ವರ್ಷಗಳಿಂದ ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿವೆ 2006ಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಗೊಂಡರೂ ಇಲ್ಲಿ ಕಲಿಯುವ ಬಡ ಮಕ್ಕಳು ಪ್ರಯೋಗಾಲಯಕ್ಕೆ ಖಾಸಗಿ ಕಾಲೇಜಿಗೆ ಅಲೆಯುವ ಪರಿಸ್ಥಿತಿ ಇದೆ ಹಿಂದೆ ಮಾಡಿದ ಯೋಜನೆಗಳು ಹಾಗೇ ಇವೆ ಅವುಗಳನ್ನು ಪೂರ್ಣಗೊಳಿಸಿ ಜನ್ಮ ನೀಡಿದ ನೆಲದ ಜನರ ಋಣ ತೀರಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

      ದಂಗೆ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ

      ದಂಗೆ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ

      ನೈತಿಕ ಮಾರ್ಗ ಬಿಟ್ಟು ಕೆಲಸ ಮಾಡಿದರೆ ದಂಗೆ ಏಳಿ ಎಂದು ಈ ಹಿಂದೆ ಜಿಲ್ಲೆಗೆ ಬಂದಾಗ ಹೇಳಿದ್ದೆ. ತಾವು ತಪ್ಪು ಮಾಡಿದರೂ ತಮ್ಮ ವಿರುದ್ಧವೂ ದಂಗೆ ಏಳಿ ಎಂಬ ಅರ್ಥದಲ್ಲಿ ಈ ಹಿಂದೆ ಆಡಿದ ಮಾತಿಗೆ ಅಪಾರ್ಥ ಕಲ್ಪಿಸಿ ಬಿಜೆಪಿ ಪ್ರತಿಭಟನೆ ಮಾಡಿದ್ದು ಸರ್ಕಾರ ಅಸ್ಥಿರ ಗಳಿಸುವುದೊಂದೆ ಆ ಪಕ್ಷದ ಕಾರ್ಯಕ್ರಮ. ಆದರೆ ತಾವು ಇದಾವುದಕ್ಕೂ ಅಂಜುವುದಿಲ್ಲ. ಸರ್ಕಾರ ಬೀಳುವ ಯಾವುದೇ ಆತಂಕವೂ ಇಲ್ಲ. ಭಾರತೀಯ ಜನತಾ ಪಕ್ಷ ಪ್ರಜ್ಞಾವಂತಿಕೆಯಿಂದ ವರ್ತಿಸಬೇಕು ಎಂದು ಹೇಳಿದರು.

      ತಮ್ಮನ್ನು ಪ್ರತಿದಿನ ಸಾವಿರಾರು ಮಂದಿ ನೋಡಿಕೊಂಡು ಬರುತ್ತಾರೆ ಸಾಧ್ಯವಾದಷ್ಟು ಮಟ್ಟಿಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸಿದ್ದೇನೆ. ಆಸಹಾಯಕರ ಪಾಲಿಗೆ ಬೆಳಕಾಗಿ ಬದುಕಬೇಕೆಂಬುದೆ ತಮ್ಮ ಧ್ಯೇಯ ಎಂದು ಅವರು ತಿಳಿಸಿದರು .

      ಸ್ಥಳೀಯ ಶಾಸಕರು ನಾಪತ್ತೆ!

      ಸ್ಥಳೀಯ ಶಾಸಕರು ನಾಪತ್ತೆ!

      ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಬೇಕಾಗಿ ಹಾಸನ ಕ್ಷೇತ್ರದ ಶಾಸಕರು ಪತ್ತೆ ಇಲ್ಲ. ಅದು ಸರಿಯಾದ ನಡವಳಿಕೆಯಲ್ಲ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು. ಬಜೆಟ್ ನಲ್ಲಿ ಹಾಸನದ ರಿಂಗ್ ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ ನೀಡಿದಾಗ ವಿರೋಧ ಪಕ್ಷಗಳು ಟೀಕಿಸಿದಾಗ ಒಂದೂ ಮಾತನಾಡದೆ, ಕ್ಷೇತ್ರಕ್ಕೆ ಹಣ ನೀಡಿದಾಗ ಕನಿಷ್ಟ ಕೃತಜ್ಞತೆಸಲಿಸದ ಮನಸ್ಥಿತಿಯ ಶಾಸಕರಿಂದ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು .

      ಮಾಜಪೇಯಿ ಅವರನ್ನು ನೆನಪಿಸಿಕೊಂಡ ದೇವೇಗೌಡರು

      ಮಾಜಪೇಯಿ ಅವರನ್ನು ನೆನಪಿಸಿಕೊಂಡ ದೇವೇಗೌಡರು

      ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಾತನಾಡಿ ವಿರೋಧ ಪಕ್ಷಗಳು ನೈತಿಕ ರಾಜಕಾರಣದ ಪ್ರದರ್ಶನ ಮಡಬೇಕು. ಮಾಜಿ ಪ್ರಧಾನಿ ವಾಜಪೇಯಿ ಅವರು ತೋರಿದ ಧಿಂಮಂತ ನಡವಳಿಕೆ ಗಮನಿಸಬೇಕು. ಜನತಂತ್ರ ವ್ಯವಸ್ಥೆಯಡಿ ರಚನೆಯಾದ ಸರ್ಕಾರವನ್ನು ಅಸ್ಥಿರಗೊಳಿಸುವುದೊಂದೆ ಒಂದು ರಾಜಕೀಯ ಪಕ್ಷದ ಗುರಿಯಾಗಬಾರದು ಎಂದರು. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಶಾಸಕರನ್ನು ನಿಭಾಯಿಸುವ ಶಕ್ತಿ ಇದೆ ಕೆಲವರಲ್ಲಿ ಸಚಿವರಾಗುವ ಬಯಕೆ ಇರಬಹುದು .ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ,ಸಮನ್ವಯ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಪ್ರಯತ್ನಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಸಿದ್ದರಾಮಯ್ಯ ಅವರು ನೇರವಾಗಿ ತಿಳಿಸಿದ್ದಾರೆ ಜೆಡಿಎಸ್ ಶಾಸಕರಲ್ಲಿ ಯಾವುದೇ ಅತೃಪ್ತಿ ಇಲ್ಲ ಇನ್ನು ಸರ್ಕಾರ ಬೀಳುವ ಭೀತಿ ಎಲ್ಲಿಂದ ಬಂತು ಎಂದರು.

      ರಾಜ್ಯದಲ್ಲಿ ಸರ್ಕಾರ ಜನಪ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರ ಆಶೀರ್ವಾದ ಅಗತ್ಯ ಎಂದ ದೇವೇಗೌಡರು ಹೇಳಿದರು.

      ಸಚಿವರಿಗೆ ಕೃತಜ್ಞತೆ ಅರ್ಪಿಸಿದ ಎಚ್ ಡಿ ರೇವಣ್ಣ

      ಸಚಿವರಿಗೆ ಕೃತಜ್ಞತೆ ಅರ್ಪಿಸಿದ ಎಚ್ ಡಿ ರೇವಣ್ಣ

      ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ ರೇವಣ್ಣ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಟ್ಟ ಸಚಿವರುಗಳಿಗೆ ಕೃತಜ್ಞತೆ ಅರ್ಪಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.

      ಸಹಕಾರ ಸಚಿವರಾದ ಬಂಡೆಪ್ಪ ಕಾಶಂಪುರ, ಉನ್ನತ ಶಿಕ್ಷಣ ಸಚಿವರಾದ ಜಿ.ಟಿ ದೇವೇಗೌಡ, ಶಿಕ್ಷಣ ಸಚಿವರಾದ ಮಹೇಶ್, ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್, ಸಾರಿಗೆ ಸಚಿವರಾದ ಡಿ.ಸಿ ತಮ್ಮಣ್ಣ, ಸಣ್ಣನೀರಾವರಿ ಸಚಿವರಾದ ಪುಟ್ಟರಾಜು, ಸಣ್ಣ ಕೈಗಾರಿಕೆ ಸಚಿವರಾದ ಎಂ.ಆರ್ ಶ್ರೀನಿವಾಸ್, ಪಶು ಸಂಗೋಪನೆ ಖಾತೆ ಸಚಿವರಾದ ವೆಂಕಟರಾವ್ ನಾಡಗೌಡ, ತೋಟಗಾರಿಕೆ ಸಚಿವರಾದ ಎಂ.ಸಿ ಮನಗೋಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್, ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಸಿ.ಎನ್ ಬಾಲಕೃಷ್ಣ, ಕೆ.ಎಂ ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ ವಿಧಾನ ಪರಿಷತ್ ಸದಸ್ಯ ರಾದ ಗೋಪಾಲಸ್ವಾಮಿ, ಹಾಗೂವಿವಿಧ ಜಿಲ್ಲೆಗಳ ಶಾಸಕರು ರಾಜ್ಯಮಟ್ಟದ ಅಧಿಕಾರಿಗಳು ವಿವಿಧ ಜನಪ್ರತಿನಿಧಿಗಳು ಹಾಜರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+