ಶ್ರವಣಬೆಳಗೊಳ : ಡಿಸೆಂಬರ್‌ನಲ್ಲಿ ಬಾಹುಬಲಿ ಮೂರ್ತಿ ಸ್ವಚ್ಛತಾ ಕಾರ್ಯ

ಹಾಸನ, ನವೆಂಬರ್ 28 : ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿರುವ ಬಾಹುಬಲಿ ಮೂರ್ತಿಯನ್ನು ರಾಸಾಯನಿಕಗಳಿಂದ ಸ್ವಚ್ಛಗೊಳಿಸಲಾಗುತ್ತದೆ. 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ಮುಗಿದ ಬಳಿಕ ಈ ಸ್ವಚ್ಛತೆ ಕಾರ್ಯ ನಡೆಸಲಾಗುತ್ತದೆ.

ಭಾರತೀಯ ಪ್ರಾಚ್ಯವಸ್ತು ಸರ್ವೇಕ್ಷಣಾಲಯ (ಎಎಸ್‌ಐ) ಈ ರಾಸಾಯನಿಕಗಳಿಂದ ಮೂರ್ತಿಯನ್ನು ಸ್ವಚ್ಛಗೊಳಿಸಲಿದೆ. ಡಿಸೆಂಬರ್ ತಿಂಗಳಿನಲ್ಲಿ ಈ ಕಾರ್ಯವನ್ನು ನಡೆಸಲು ಎಎಸ್‌ಐ ನಿರ್ಧರಿಸಿದ್ದು, ಅಗತ್ಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ.

ಪ್ರಾಚ್ಯವಸ್ತು ಸರ್ವೇಕ್ಷಣಾಲಯದ ವಿಜ್ಞಾನ ವಿಭಾಗಕ್ಕೆ ಈಗಾಗಲೇ ಮೂರ್ತಿಯ ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಬೇಕು ಎಂದು ಪತ್ರ ಬರೆಯಲಾಗಿದೆ. ಈ ಸ್ವಚ್ಛತಾ ಕಾರ್ಯದ ಜೊತೆಗೆ ಮೂರ್ತಿಯ ಬಗ್ಗೆ ಅಧ್ಯಯನವನ್ನು ನಡೆಸಲಾಗುತ್ತದೆ.

Gomateshwara statue chemical wash in December

2018ರ ಫೆಬ್ರವರಿ 7ರಂದು ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದರು. ಫೆ.26ರಂದು ಸಮಾರೋಪ ಸಮಾರಂಭ ನಡೆದಿತ್ತು.

ಹೊಸ ಮೆಟ್ಟಿಲು ನಿರ್ಮಾಣ : ಚಂದ್ರಗಿರಿ ಬೆಟ್ಟವನ್ನು ಏರಲು ಮತ್ತೊಂದು ಜೋಡಿ ಮೆಟ್ಟಿಲನ್ನು ನಿರ್ಮಾಣ ಮಾಡಲಾಗುತ್ತದೆ. ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಮೆಟ್ಟಿಲು ನಿರ್ಮಾಣದ ಕೆಲಸವನ್ನು ಈಗಾಗಲೇ ಆರಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+