H3N2 1st Death in Karnataka : ಆತಂಕ ಸೃಷ್ಟಿಸಿದ ವೈರಸ್‌ಗೆ ಕರ್ನಾಟಕದಲ್ಲಿ ಮೊದಲ ಬಲಿ

ಹಾಸನ, ಮಾರ್ಚ್‌, 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಚ್‌ 1 ಎನ್‌ 1 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಎಚ್‌3 ಎನ್‌2 ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ. ಈ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲಿ H3N2ಗೆ ಮೊದಲ ಬಲಿ ಆಗಿರುವ ಪ್ರಕರಣ ದಾಖಲಾಗಿದೆ.

ಈ ಸೋಂಕಿನಿಂದ ಹಾಸನ ಜಿಲ್ಲೆಯ ಆಲೂರಿನಲ್ಲಿ 78 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾರ್ಚ್ 1 ರಂದು ಇವರು ಮೃತಪಟ್ಟಿದ್ದು, ಇವರಿಗೆ ಎಚ್‌3 ಎನ್‌2 ವೈರಸ್‌ ದೃಢ ಆಗಿರುವ ಬಗ್ಗೆ ವೈದ್ಯರು ಇಂದು ಮಾಹಿತಿ ನೀಡಿದ್ದಾರೆ. ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದರಿಂದ ವೃದ್ಧ ಆಸ್ಪತ್ರೆಗೆ ಸೇರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೇ ಈಗಾಗಲೇ ಆಲೂರಿನಲ್ಲಿ ಎಲ್ಲರ ಅರೋಗ್ಯ ತಪಾಸಣೆ ನಡೆಸಿ ಪರೀಕ್ಷೆಗಾಗಿ ಗಂಟಲು ದ್ರವವನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನ ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.

First death for H3N2 virus in Hassan district

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+