ಹಾಸನಾಂಬ ಜಾತ್ರಾ ಮಹೋತ್ಸವ: ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಈ ಬಾರಿಯ ವಿಶೇಷತೆ ಏನು ಗೊತ್ತಾ?
ಬೆಂಗಳೂರು, ಅಕ್ಟೋಬರ್ 6: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ ಅಕ್ಟೋಬರ್ 9ರಿಂದ ಅಕ್ಟೋಬರ್ 23ರ ವರೆಗೆ ಉತ್ಸವ ನಡೆಯಲಿದ್ದು, ಈ ಬಾರಿ ವಿಐಪಿ ದರ್ಶನದ ಕುರಿತು ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಇದು ಭಕ್ತರಿಗೂ ಸಿಹಿ ಸುದ್ದಿಯಾಗಿದೆ. ಹಾಗಾದ್ರೆ, ಅದೇನು ಎನ್ನುವ ಮಾಹಿತಿಯನ್ನು ಸಂಪೂರ್ಣ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತಿಹಾಸ ಪ್ರಸಿದ್ಧ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಕಾಸಸೌಧದಲ್ಲಿ ಸೋಮವಾರ (ಅಕ್ಟೋಬರ್ 6) ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದರು.

"ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದಾರೆ. ಆದ್ದರಿಂದ ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು," ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.
"ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು," ಎಂದು ತಿಳಿಸಿದರು.
"ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶವಿಲ್ಲ," ಎಂದು ತಿಳಿಸಿದರು.
"ಅಷ್ಟೇ ಅಲ್ಲದೆ, 1,000 ರೂಪಾಯಿ ಹಾಗೂ 300 ರೂಪಾಯಿ ಬೆಲೆಯ ಪಾಸ್‌ಗಳನ್ನೂ ವಿತರಣೆ ಮಾಡಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್‌ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10:30ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅವಕಾಶ ಇರಲಿದೆ." ಎಂದು ಹೇಳಿದರು.
"ಪಾಸ್ ಪಡೆದವರಿಗೆ ಬೆಳಗ್ಗೆ 7.30ರಿಂದ 10 ಗಂಟೆವರೆಗೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1,000 ಪಾಸ್‌ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು," ಎಂದು ಮನವಿ ಮಾಡಿದರು.
"ಹಾಸನಾಂಭ ದೇವಾಲಯಕ್ಕೆ 2021 ರಲ್ಲಿ 1,00,000 ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022ರಲ್ಲಿ 3,00,000 ಹಾಗೂ 2023ರಲ್ಲಿ 6,00,000 ಜನ ಭೇಟಿ ನೀಡಿದ್ದಾರೆ. ಕಳೆದ ವರ್ಷ 20,00,000 ಜನ ಭೇಟಿ ನೀಡಿದ್ದಾರೆ. ಆದ್ದರಿಂದ ಈ ವರ್ಷ 25,00,000 ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ," ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಅಕ್ಟೋಬರ್ 9ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ. ಮೂರು ವೇದಿಕೆ ಸಿದ್ದಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ ಎಂದು ಹೇಳಿದರು.
"ಜೊತೆಗೆ ಟೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ, ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಇರಾದೆ ಇದೆ" ಎಂದು ಹೇಳಿದರು.
"ಜನ ಸಂದಣಿ ನಿಯತ್ರಿಸುವ ಉದ್ದೇಶದಿಂದ 2,000 ಪೊಲೀಸರನ್ನು ನೇಮಕ ಮಾಡಲಾಗಿದೆ. 280ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವುಗಳಿಗೂ ಎಐ ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ," ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications