ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನಾಂಬೆ ದರ್ಶನಕ್ಕೆ ದಿನಾಂಕ ನಿಗದಿ; ಆದರೆ ಭಕ್ತರಿಗೆ ನೋ ಎಂಟ್ರಿ

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ಅಕ್ಟೋಬರ್ 9: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯನ್ನು ನೋಡಲು ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಬರುತ್ತಿದ್ದರು. ಆದರೆ ಈ ಬಾರಿ ಕೊರೊನಾ ಸೋಂಕಿನ ಹರಡುವಿಕೆ ತಡೆಯುವ ಉದ್ದೇಶದಿಂದ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿಲ್ಲ.

ಈ ವರ್ಷ ನವೆಂಬರ್ 5 ರಿಂದ 16 ರವರೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ನಿರ್ಧರಿಸಲಾಗಿದ್ದು, ಕೊರೊನಾ ಕಾರಣದಿಂದಾಗಿ ದೇವಾಲಯಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆದರೆ ಹಾಸನದ ಸುಮಾರು 12 ಕಡೆ ಎಲ್‍ಇಡಿ ಪರದೆ ಹಾಕಿ, ನೇರ ಪ್ರಸಾರದ ಮೂಲಕ ಹಾಸನಾಂಬ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಈ ವರ್ಷ ಭಕ್ತರಿಗೆ ಹಾಸನಾಂಬ ದೇವಿ ದರ್ಶನವಿಲ್ಲ?ಈ ವರ್ಷ ಭಕ್ತರಿಗೆ ಹಾಸನಾಂಬ ದೇವಿ ದರ್ಶನವಿಲ್ಲ?

ಬಾಗಿಲು ತೆರೆಯುವ ವೇಳೆ ಉದ್ಘಾಟನೆಗೆ ಬರುವಂತೆ ಸಿಎಂ ಆಹ್ವಾನಿಸುತ್ತೇವೆ. ಮೊದಲ ಹಾಗೂ ಕೊನೆಯ ದಿನ ಆಹ್ವಾನಿತರಿಗೆ ಮಾತ್ರ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹಾಸನ ಉಸ್ತುವಾರಿ ಸಚಿವ ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.

Hassan: Hasanamba temple to open from November 5 for 11 days

ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿರುವ ಹಾಸನಾಂಬ ದೇವಾಲಯದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಹಾಸನಾಂಬ ದೇವಿಯನ್ನು ನೋಡಲು ಲಕ್ಷಾಂತರ ಜನರು ಬರುತ್ತಾರೆ. ಕಿಲೋ ಮಿಟರ್ ‍ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಾರೆ. ಆದರೆ ಈ ಬಾರಿ ಅದೆಲ್ಲಕ್ಕೂ ಕೊರೊನಾ ಅಡ್ಡಿಯಾಗಿದೆ.

Recommended Video

Rain Alert : ರಾಜ್ಯದಂತ ಭಾರಿ ಮಳೆ ಸಾಧ್ಯತೆ | Oneindia Kannada

ಜೊತೆಗೆ ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಮೊದಲನೇ ಮತ್ತು ಕೊನೆಯ ದಿನ ಆಹ್ವಾನಿತ ಗಣ್ಯರಿಗೆ ಹಾಸನಾಂಬೆ ನೇರ ದರ್ಶನಕ್ಕೆ ಅವಕಾಶ ನೀಡಿರುವುದಕ್ಕೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ನೇರ ದರ್ಶನ ವ್ಯವಸ್ಥೆ ಇಲ್ಲ ಎಂದ ಮೇಲೆ ಯಾರಿಗೂ ನೇರ ದರ್ಶನದ ವ್ಯವಸ್ಥೆ ಕಲ್ಪಿಸದೆ, ಎಲ್ಲರಿಗೂ ಒಂದೇ ಕಾನೂನು ಪಾಲಿಸಲಿ. ದೇವರ ದರ್ಶನ ವಿಷಯವಾಗಿ ತಾರತಮ್ಯ ಮಾಡಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.

English summary
Hasanamba temple to open from November 5 for 11 days. But there is no entry to public
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X