ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುರುವಾರ ಹಾಸನಾಂಬ ದೇವಾಲಯ ಓಪನ್; ದರ್ಶನದ ಸಮಯ ತಿಳಿಯಿರಿ

|
Google Oneindia Kannada News

ಹಾಸನ, ಅಕ್ಟೋಬರ್ 27; ಐತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬ ದೇವಾಲಯ ಅಕ್ಟೋಬರ್ 28ರಂದು ಬಾಗಿಲು ತೆರೆಯಲಿದೆ. ಹಾಸನ ಜಿಲ್ಲಾಡಳಿತದ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಶುಕ್ರವಾರದಿಂದ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುರುವಾರ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಸನಾಂಬ ದೇವಾಲಯ ಆವರಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಈ ಬಾರಿ ಸಾರ್ವಜನಿಕರಿಗೆ ಅವಕಾಶ ದೊರೆಯಲಿದೆ.

ಹಾಸನ; ಉದ್ಯೋಗ ಮೇಳ, ಅತಿಥಿ ಶಿಕ್ಷಕರ ನೇಮಕಹಾಸನ; ಉದ್ಯೋಗ ಮೇಳ, ಅತಿಥಿ ಶಿಕ್ಷಕರ ನೇಮಕ

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಹಾಸನಾಂಬೆ ದೇವಾಲಯದ ಬಾಗಿಲನ್ನು ಅಕ್ಟೋಬರ್28ರ ಮಧ್ಯಾಹ್ನ ತೆರೆಯಲಾಗುತ್ತದೆ. ನವೆಂಬರ್ 6ರಂದು ಬಾಗಿಲು ಮುಚ್ಚಲಾಗುತ್ತದೆ.

ಹಾಸನಾಂಬೆ ಜಾತ್ರೆ ಮುಕ್ತಾಯ; ಹುಂಡಿ ಸಂಗ್ರಹ ಕುಸಿತ! ಹಾಸನಾಂಬೆ ಜಾತ್ರೆ ಮುಕ್ತಾಯ; ಹುಂಡಿ ಸಂಗ್ರಹ ಕುಸಿತ!

ಭಕ್ತರು ಅಕ್ಟೋಬರ್ 29ರಿಂದ ನವೆಂಬರ್ 5ರ ವರೆಗೆ ಪ್ರತಿ ದಿನ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯ ವರೆಗೆ ದರ್ಶನ ಪಡೆಯಬಹುದು. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಗೆ ತನಕ, ನೈವೇದ್ಯ ಸಮರ್ಪಣೆ ಹೊರತು ಸಮಯದಲ್ಲಿ ಮಾತ್ರ ದರ್ಶನಕ್ಕೆ ಅವಕಾಶವಿಲ್ಲ. ಆದರೆ ದರ್ಶನ ಪಡೆಯಲು ಆಗಮಿಸುವ ಭಕ್ತರು ಕಡ್ಡಾಯವಾಗಿ ಕನಿಷ್ಠ 1 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಹಾಗೂ ಈ ಬಗ್ಗೆ ಮುದ್ರಿತ ಅಥವಾ ಡಿಜಿಟಲ್ ದಾಖಲೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಡಳಿತ ಹೇಳಿದೆ.

ಹಾಸನಾಂಬ ಜಾತ್ರೆ; ಭಕ್ತರಿಗೆ ಸಿಹಿಸುದ್ದಿ ಕೊಟ್ಟ ಸಚಿವರು ಹಾಸನಾಂಬ ಜಾತ್ರೆ; ಭಕ್ತರಿಗೆ ಸಿಹಿಸುದ್ದಿ ಕೊಟ್ಟ ಸಚಿವರು

15 ತಪಾಸಣಾ ತಂಡ ನಿಯೋಜನೆ

15 ತಪಾಸಣಾ ತಂಡ ನಿಯೋಜನೆ

ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, "ಭಕ್ತರು ಲಸಿಕೆ ಪಡೆದಿರುವ ಬಗ್ಗೆ ತಪಾಸಣೆ ನಡೆಸಲು 15 ಕಡೆ ತಪಾಸಣಾ ತಂಡ ನಿಯೋಜಿಸಲಾಗಿದೆ. ಅವರೆಲ್ಲರೂ ಭಕ್ತಾದಿಗಳೊಂದಿಗೆ ಸಂಯಮದಿಂದ ವರ್ತಿಸಿ ಮಾಹಿತಿ ಪಡೆದು ಪರಿಶೀಲನೆ ನೆಡೆಸಬೇಕು. ಎಲ್ಲಾ ಇಲಾಖಾ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಲೋಪಗಳಿಲ್ಲದಂತೆ ದರ್ಶನ ಉತ್ಸವಕ್ಕೆ ಎಲ್ಲಾ ವ್ಯವಸ್ಥೆ ಮಾಡುವಂತೆ ಹಾಗೂ ಎಲ್ಲಾ ಇಲಾಖೆ ಅಧಿಕಾರಿ ಸಿಬ್ಬಂದಿ ಇದರ ಯಶಸ್ಸಿಗೆ ಶ್ರಮಿಸುವಂತೆ" ಕರೆ ನೀಡಿದರು.

ಶಿಷ್ಟಾಚಾರಗಳ ಪಾಲನೆ

ಶಿಷ್ಟಾಚಾರಗಳ ಪಾಲನೆ

ಶಿಷ್ಟಾಚಾರ, ಅತಿಥಿಗಣ್ಯರ ದರ್ಶನ ವ್ಯವಸ್ಥೆಗಳಿಗೆ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಯಾವುದೇ ಕರ್ತವ್ಯ ಲೋಪವಿಲ್ಲದಂತೆ ಅವರು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ದೇವಾಲಯದ ಪುಷ್ಪಾಲಂಕಾರ ಪ್ರತಿದಿನ ಬದಲಾಯಿಸುವಂತೆ ಸೂಚನೆ ನೀಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮಾತನಾಡಿ, "ಹಾಸನಾಂಬೆ ದರ್ಶನೋತ್ಸವದ ಹಿನ್ನಲೆಯಲ್ಲಿ ಸಕಲ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದಿನದ 24 ಗಂಟೆಗಳ ಕಾಲವೂ ಅಧಿಕಾರಿ, ಸಿಬ್ಬಂದಿಗಳ ತಂಡ ತಪಾಸಣೆ ಕಾರ್ಯ ಹಾಗೂ ಭದ್ರತಾ ಕರ್ತವ್ಯದಲ್ಲಿ ತೊಡಗಲಿದ್ದಾರೆ. ಇತರ ಇಲಾಖಾ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು" ಎಂದರು.

ವಿಶೇಷ ಪಾಸುಗಳ ವ್ಯವಸ್ಥೆ

ವಿಶೇಷ ಪಾಸುಗಳ ವ್ಯವಸ್ಥೆ

ಹಾಸನಾಂಬ ದರ್ಶನೋತ್ಸವಕ್ಕೆ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಜನರು ಸಹ ಸಹಕರಿಸಬೇಕು. ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಕರೆ ನೀಡಲಾಗಿದೆ. ಭಕ್ತಾದಿಗಳು ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯ ಮತ್ತು ಈ ಬಗ್ಗೆ ದಾಖಲೆ ಇರಿಸಿಕೊಂಡು ತಪಾಸಣಾ ತಂಡ ಕೇಳಿದಾಗ ತೋರಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ವರ್ಷವೂ ಸಹ ವಿಶೇಷ ದರ್ಶನಕ್ಕೆ ಅವಕಾಶಗಳನ್ನು ನೀಡಲಾಗಿದೆ. 1000 ರೂ. ಹಾಗೂ 300 ರೂ. ಗಳ ಪಾಸುಗಳನ್ನು ಇದಕ್ಕಾಗಿ ವಿತರಿಸಲಾಗುತ್ತದೆ. ಸಾಮಾನ್ಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯಲಿದೆ

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯಲಿದೆ

ವರ್ಷಕ್ಕೊಮ್ಮೆ ಮಾತ್ರ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು.

ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗುತ್ತದೆ. ದೀಪಾಲಂಕಾರ, ಬ್ಯಾರಿಕೆಡ್ ಅಳವಡಿಕೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಸನ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ಆಕರ್ಷಕವಾಗಿ ಮಾಡುವುದರ ಜೊತೆಗೆ ಕೋವಿಡ್ ಲಸಿಕೆ ಪಡೆಯಿರಿ ಎಂಬ ಸಂದೇಶಗಳನ್ನು ಸಹ ಅಲಂಕಾರದ ಮೂಲಕ ನೀಡಲಾಗುತ್ತದೆ.

English summary
Hasanamba temple will open on October 28. Devotees allowed to darshana from Friday. Temple opens once in a year and attracts large number of devotees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X