Hasanamba Utsav: ಹೆಲಿಟೂರಿಸಂಗೆ ಚಾಲನೆ, ಕಡಿಮೆ ವೆಚ್ಚದಲ್ಲಿ ಹಾಸನ ಸುತ್ತಿ, ದರಗಳ ವಿವರ ಹೀಗಿದೆ
ಹಾಸನ, ನವೆಂಬರ್, 03: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ಗುರುವಾರ (ನವೆಂಬರ್ 02) ತೆರೆದಿದ್ದು, ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್‌ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ. ಹಾಗೆಯೇ ಇಂದು ಅಧಿಕೃತವಾಗಿ ಇಂದು ಹೆಲಿಟೂರಿಸಂಗೆ ಚಾಲನೆ ನೀಡಲಾಗಿದೆ.
ಹಾಸನಾಂಬೆ ದರ್ಶನೋತ್ಸವ ಹಿನ್ನೆಲೆ ಜಿಲ್ಲಾಧಿಕಾರಿ ಸತ್ಯಭಾಮ ಅವರು, ಹೆಲಿಕಾಪ್ಟರ್‌ನಲ್ಲಿ ಹಾರಾಟ ನಡೆಸುವ ಮೂಲಕ ಇದೇ ಮೊದಲ ಬಾರಿಗೆ ಹೆಲಿ ಟೂರಿಸಂಗೆ ಚಾಲನೆ ನೀಡಿದರು. ಹಾಗಸದಲ್ಲಿ ಹಾರೋ ಬಯಸಿದರೆ ಒಬ್ಬರಿಗೆ ಒಂದು ಸುತ್ತಿಗೆ 4300 ದರ ನಿಗದಿ ಮಾಡಲಾಗಿದೆ. ಈ ಹೆಲಿಕಾಪ್ಟರ್ ಹಾಸನಾಂಬೆ ದೇಗುಲ ವ್ಯಾಪ್ತಿಯಲ್ಲಿ 6 ನಿಮಿಷ ಹಾರಾಟ ನಡೆಸಲಿದ್ದು, ಇದು ಭಕ್ತರಿಗೆ ವಿಭಿನ್ನ ಅನುಭವ ನೀಡಲಿದೆ.

ಗುರುವಾರ ಬಾಗಿಲು ತೆರೆದಿರುವ ಹಾಸನಾಂಬ ದೇಗುಲ ಬಲಿಪಾಡ್ಯ ಮಾರನೇ ದಿನ ಮುಚ್ಚಲಿದ್ದು, ಈ ವೇಳೆ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅಷ್ಟೇ ಅಲ್ಲದೆ ಅಧಿದೇವತೆಯಲ್ಲಿ ಭಕ್ತರು ಬೇಡಿಕೊಂಡ ಬೇಡಿಕೆಗಳೆಲ್ಲವೂ ಈಡೇರುತ್ತವೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ. ಆದ್ದರಿಂದ ದೇವಿ ದರ್ಶನಕ್ಕೆ ಬರೀ ಹಾಸನ ಜಿಲ್ಲೆ ಅಲ್ಲದೆ ರಾಜ್ಯದ ನಾನ ಕಡೆಯಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತರ ದಂಡು
ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬ, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಬೆಳಗ್ಗೆ 9 ಗಂಟೆಯಿಂದಲೇ ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ, ಸರತಿ ಸಾಲಲ್ಲಿ ನಿಂತು ತಾಯಿಯ ದರ್ಶನ ಪಡೆದು ಪುನೀತರಾದರು. ಹಾಗೆಯೇ ದೇವೇಗೌಡರು, ಪತ್ನಿ ಚೆನ್ನಮ್ಮ, ತಮ್ಮ ಇಬ್ಬರು ಪುತ್ರಿಯರೊಂದಿಗೆ ಆಗಮಿಸಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ದೇವೇಗೌಡರು, ಜಗನ್ಮಾತೆ ಹಾಸನಾಂಬೆ ತಾಯಿ ದರ್ಶನಕ್ಕೆ ಕುಟುಂಬ ಸಮೇತ ಬಂದಿದ್ದೇವೆ. ಬಾಗಿಲು ಮುಚ್ಚುವಾಗ ಇಡುವ ನೈವೇದ್ಯ ಕೆಡುವುದಿಲ್ಲ, ಹೂ ಬಾಡುವುದಿಲ್ಲ, ದೀಪ ಆರಿರುವುದಿಲ್ಲ ಎಂಬಿತ್ಯಾದಿ ನಂಬಿಕೆ ಇದೆ. ಉತ್ತರದಲ್ಲಿ ವೈಷ್ಣವಿ ಸ್ವರೂಪದಂತೆ ಇಲ್ಲಿ ಹಾಸನಾಂಬೆ ಇದ್ದಾಳೆ. ಮುಂದಿನ ಬಾರಿ ಆರೋಗ್ಯವಾಗಿ ಮೆಟ್ಟಿಲು ಹತ್ತಿ ಬರುವ ಶಕ್ತಿಕೊಡು ತಾಯಿ ಎಂದು ದೇವಿಯಲ್ಲಿ ಬೇಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಕುಟುಂಬದ ಎಲ್ಲರೂ ಬಂದು ದೇವಿಯ ದರ್ಶನ ಪಡೆಯಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಹಾಸನಾಂಬೆ ಉತ್ಸವದಲ್ಲಿ ಎಲ್ಲಾ ವ್ಯವಸ್ಥೆ ಅಚ್ಚುಕಟ್ಟಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಗೌಡರು, ವಿಜೃಂಭಣೆಯ ದೀಪಾಲಂಕಾರವನ್ನು ಹಿಂದೆ ನಾನೆಂದೂ ನೋಡಿರಲಿಲ್ಲ. ಈ ಬಾರಿ ಅತ್ಯದ್ಭುತವಾಗಿದೆ. ಭಕ್ತರಿಗೆ ಬೇಕಾಗುವ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕಾಗಿ ಸ್ಥಳೀಯ ಶಾಸಕರಾದ ಸ್ವರೂಪ್, ಜಿಲ್ಲಾಧಿಕಾರಿ ಮತ್ತವರ ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ದೇವಾಲಯದ ಆಡಳಿತ ಮಂಡಳಿಗೂ ಅಭಿನಂದನೆ ಹೇಳಿದರು. ಇನ್ನು ಉತ್ಸವ ಯಶಸ್ವಿಯಾಗಲಿದೆ, ದೇವಿಯ ಅನುಗ್ರಹ ಎಲ್ಲರಿಗೂ ಸಿಗಲಿ ಎಂದು ಆಶಿಸಿದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೆಳಗ್ಗೆಯೇ ಬಂದು ದೇವಿಯ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದು ನಂತರ ಮಾತನಾಡಿದ ಮಾಜಿ ಸಚಿವ ಕೆ.ಗೋಪಾಲಯ್ಯ, ಹಿಂದೆ ಮೂರು ವರ್ಷ ಹಾಸನಾಂಬೆ ದರ್ಶನ ಮಾಡುವ ಸೌಭಾಗ್ಯ ಸಿಕ್ಕಿತ್ತು. ದೇವಿ ಆಶೀರ್ವಾದದಿಂದ ಮತ್ತೊಮ್ಮೆ ಶಾಸಕ ಆಗಿದ್ದೇನೆ. ಸರ್ಕಾರ ಬದಲಾದರೂ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ನಂಬಿರುವ ಜನರಿಗೆ ಫಲ ಕೊಡುವ ಪವಿತ್ರ ದೇವಾಲಯ ಇದು. ತಾಯಿ ಹಾಸನಾಂಬೆ ಬರ ನಿವಾರಿಸಿ ಮಳೆ ಬರುವಂತೆ ಮಾಡಲಿ, ರಾಜ್ಯ ಸಮೃದ್ಧವಾಗಲಿ ಎಂದು ಬೇಡಿದರು. ಪತ್ರಿವರ್ಷದಂತೆ ಈ ಬಾರಿಯೂ ಅಚ್ಚುಕಟ್ಟು ವ್ಯವಸ್ಥೆ ಮಾಡಲಾಗಿದೆ ಎಂದರು.
ಇಂದು ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ನೈವೇದ್ಯ ಹಾಗೂ ದೇವಿಯ ಅಲಂಕಾರಕ್ಕೆ ಅವಕಾಶ ನೀಡಲಾಗಿದೆ. ನಾಳೆ ಬೆಳಗ್ಗೆಯಿಂದ ನಿರಂತರ ದರ್ಶನ ಇರಲಿದೆ. ದಿನದಲ್ಲಿ ಎರಡು ಬಾರಿ ನೈವೇದ್ಯಕ್ಕೆ ಬಿಟ್ಟರೆ ಉಳಿದೆಲ್ಲಾ ಸಮಯದಲ್ಲಿ ದೇವಿಯ ದರ್ಶನ ಮಾಡಬಹುದಾಗಿದೆ. ಕ್ಯೂನಲ್ಲಿ ನಿಂತ ಜನರಿಗೆ ಕುಡಿಯುವ ನೀರು, ಮಜ್ಜಿಗೆ ಸೇರಿದಂತೆ ಎಲ್ಲಾ ಸೌಲಭ್ಯವನ್ನು ಜಿಲ್ಲಾಡಳಿತ ಒದಗಿಸುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications