ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

By ಪ್ರತಿನಿಧಿ
|
Google Oneindia Kannada News

ಹಾಸನ, ಸೆಪ್ಟೆಂಬರ್‌, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಗಣ್ಯರನ್ನು ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಾಸನಾಂಬ ದೇವಾಲಯದ ಬಾಗಿಲು ಅಕ್ಟೋಬರ್ 13ರಿಂದ ತೆರೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಧಿದೇವತೆಯ ದರ್ಶನವನ್ನು ಭಕ್ತರು ಪಡೆಯಬಹುದಾಗಿದೆ. ಒಟ್ಟು 15 ದಿನಗಳ ಕಾಲ ದೇವಾಲಯ ತೆರೆಯಲಿದೆ. ಆಶ್ವಿಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ಹಾಸನಾಂಬೆಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇಯ ದಿನ ಶಾಸ್ತ್ರೋಕ್ತವಾಗಿ ಗರ್ಭಗುಡಿಗೆ ಬಾಗಿಲು ಹಾಕಲಾಗುತ್ತದೆ. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಬಾಗಿಲು ತೆರೆಯುವ ಮತ್ತು ಮುಚ್ಚುವ ವೇಳೆ ಉಪಸ್ಥಿತರಿರುತ್ತಾರೆ. ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ಭಕ್ತರಿಗೆ ಹಲವು ನಿಬಂಧನೆಗಳನ್ನು ಹಾಕಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.

ಮುಚ್ಚಿದ ಹಾಸನಾಂಬೆ ದೇವಾಲಯ; 10 ದಿನದ ಜಾತ್ರೆಗೆ ವಿದ್ಯುಕ್ತ ತೆರೆಮುಚ್ಚಿದ ಹಾಸನಾಂಬೆ ದೇವಾಲಯ; 10 ದಿನದ ಜಾತ್ರೆಗೆ ವಿದ್ಯುಕ್ತ ತೆರೆ

ಈ ಕುರಿತು ಮಾತನಾಡಿದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂಗೌಡ, ಪ್ರತಿ ವರ್ಷದಂತೆ ಈ ಬಾರಿಯೂ 15 ದಿನಗಳ ಕಾಲ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಮೊದಲ ಮತ್ತು ಕೊನೆಯ ದಿನ ಹಾಗೂ ಆಕ್ಟೋಬರ್ 25ರ ಸೂರ್ಯ ಗ್ರಹಣದ ದಿನದಂದು ಭಕ್ತರಿಗೆ ಪ್ರವೇಶ ಇರುವುದಿಲ್ಲ. ಇನ್ನುಳಿದ 12 ದಿನ ಭಕ್ತರು ತಾಯಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಅ. 27ಕ್ಕೆ ಮುಚ್ಚಲಿರುವ ದೇವಸ್ಥಾನದ ಬಾಗಿಲು

ಅ. 27ಕ್ಕೆ ಮುಚ್ಚಲಿರುವ ದೇವಸ್ಥಾನದ ಬಾಗಿಲು

ಪವಾಡ ಕ್ಷೇತ್ರವೆಂದೇ ಕರೆಸಿಕೊಳ್ಳುವ ಹಾಸನ ನಗರದ ದೇವತೆ, ಸಪ್ತಮಾತೃಕೆಯರ ಕ್ಷೇತ್ರ ಹಾಸನದ ಹಾಸನಾಂಬೆಯ ಜಾತ್ರಾಮಹೋತ್ಸವ ಅಕ್ಟೋಬರ್ 13 ಕ್ಕೆ ಚಾಲನೆ ಆಗಲಿದೆ. ಆಶ್ವೀಜ ಮಾಸದ ಪೌರ್ಣಿಯ ನಂತರ ಬರುವ ಮೊದಲ ಗುರುವಾರ ಗರ್ಭಗುಡಿಯ ಬಾಗಿಲು ತೆರೆದು, ಬಲಿಪಾಡ್ಯಮಿಯ ಮಾರನೆಯ ದಿನ ಗರ್ಭಗುಡಿ ಬಾಗಿಲು ಮುಚ್ಚುವುದು ವಾಡಿಕೆಯಾಗಿ ನಡೆದುಕೊಂಡು ಬಂದಿದೆ. ಅದರಂತೆ ಅಕ್ಟೋಬರ್ 13ರಂದು ಗರ್ಭಗುಡಿಯ ಬಾಗಿಲು ತೆರೆದು, ಅಕ್ಟೋಬರ್ 27ಕ್ಕೆ ಬಾಗಿಲು ಮುಚ್ಚುಲಾಗುವುದು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲು, ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ, ದೇವಾಲಯ ಆಡಳಿತಾಧಿಕಾರಿ ಎಸಿ ಅವರನ್ನೊಳಗೊಂಡಂತೆ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಹಾಸನಾಂಬ ದರ್ಶನಕ್ಕೆ ತೆರೆ : 2.64 ಕೋಟಿ ಹುಂಡಿ ಕಾಣಿಕೆ ಸಂಗ್ರಹಹಾಸನಾಂಬ ದರ್ಶನಕ್ಕೆ ತೆರೆ : 2.64 ಕೋಟಿ ಹುಂಡಿ ಕಾಣಿಕೆ ಸಂಗ್ರಹ

ಕೊರೊನಾದಿಂದ ಕಳೆಗುಂದಿದ್ದ ಜಾತ್ರಾ ಮಹೋತ್ಸವ

ಕೊರೊನಾದಿಂದ ಕಳೆಗುಂದಿದ್ದ ಜಾತ್ರಾ ಮಹೋತ್ಸವ

ಮೊದಲನೇ ದಿನ ಹಾಗೂ ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಇನ್ನು ಈ ಬಾರಿ ಒಂದು ದಿನ ಗ್ರಹಣ ಬಂದಿರುವುದರಿಂದ ಒಟ್ಟು ಮೂರು ದಿನಗಳು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖ ಆಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದೆ. ಡಿಸಿ ಹಾಗೂ ಎಸ್‌ಪಿಯವರಿಗೆ ಮೊದಲನೇ ಜಾತ್ರಾ ಮಹೋತ್ಸವ ಆಗಿರುವುದು ಒಂದು ರೀತಿಯ ಸವಾಲಾಗಿದೆ. ಅಗತ್ಯ‌ಕ್ರಮಗಳ ಬಗ್ಗೆ ಡಿಸಿ ಹಾಗೂ ಎಸ್ಪಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ್ದು, ಭಕ್ತರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿ ಅರ್ಚನಾ ತಿಳಿದಿದ್ದಾರೆ.

ಜಾತ್ರಾ ಮಹೋತ್ಸವಕ್ಕೆ ಭಾಗಿಯಾಗುವ ಗಣ್ಯರು?

ಜಾತ್ರಾ ಮಹೋತ್ಸವಕ್ಕೆ ಭಾಗಿಯಾಗುವ ಗಣ್ಯರು?

ಜಾತ್ರಾ ಮಹೋತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು, ರಾಜ್ಯದ ಮಾಜಿ ಸಿಎಂಗಳು, ಹಾಲಿ ಶಾಸಕರು, ಸೇರಿದಂತೆ ಎಲ್ಲಾ ಪ್ರಮುಖ ಗಣ್ಯರನ್ನು ಆಹ್ವಾನಿಸಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಹಾಸನಂಬೆಯ ದರ್ಶನಕ್ಕೆ ರಾಜ್ಯ ಮಾತ್ರವಲ್ಲದೇ, ಹೊರರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ದೇವಿಯ ಪ್ರಸಿದ್ಧಿಗೆ ಹಿಡಿದ ಕೈಗನ್ನಡಿ ಆಗಿದೆ. ಎ ಗ್ರೇಡ್ ಸ್ಥಾನ ಹಿಂದಿರುವ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಇಂದಿನಿಂದಲೇ ಜಿಲ್ಲಾಡಳಿತ ಸಿದ್ಧತೆಗೆ ಮುಂದಾಗಿದೆ.

ಹಾಸನ ಎಂಬ ಹೆಸಲು ಬರಲು ಕಾರಣ?

ಹಾಸನ ಎಂಬ ಹೆಸಲು ಬರಲು ಕಾರಣ?

ಸುಮಾರು 12ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರನಾದ ಶ್ರೀ ಕೃಷ್ಣ ನಾಯ್ಕರು ಪ್ರಯಾಣ ನಡೆಸಿದಾಗ ಮಾರ್ಗ ಮಧ್ಯದಲ್ಲಿ ಆದಿಶಕ್ತಿ ಸ್ವರೂಪಿಣಿ ಆಗಿ ದೇವತೆ ಪ್ರತ್ಯಕ್ಷಳಾದಳು. ಈ ವೇಳೆ ಆಕೆ ತಾನು ಇಲ್ಲಿ ಹುತ್ತದ ಸ್ವರೂಪದಲ್ಲಿ ನೆಲೆಸುವೆ. ಗುಡಿಯನ್ನು ಕಟ್ಟುವಂತೆ ಸೂಚನೆ ನೀಡಿದ್ಧಳಂತೆ. ಅದರಂತೆಯೇ ಶ್ರೀ ಕೃಷ್ಣ ನಾಯ್ಕರು ದೇವಿಗೆ ಗುಡಿ ಕಟ್ಟಿಸಿದರು. ಮಹಾಭಾರತದ ಅರ್ಜುನನ ಮೊಮ್ಮಗ ಜನಮೇಜಯ ಶಾಪಗ್ರಸ್ಥನಾಗಿದ್ದ ಕಾಲದಲ್ಲಿ ಇಲ್ಲಿ ನೆಲೆಸಿದ್ದ. ಆಗ ಈ ಸ್ಥಳಕ್ಕೆ ಸಿಂಹಾಸನಪುರಿ ಎಂಬ ಹೆಸರಿತ್ತು. ನಂತರ ಸಿಂಹಾಸನಪುರ ಆಡು ಮಾತಿನಿಂದ ಹಾಸನ ಎಂದು ನಂಬಲಾಗಿದೆ. ಇನ್ನು ಪುರಾಣಗಳಲ್ಲೂ ಹಾಸನದ ಬಗ್ಗೆ ಉಲ್ಲೇಖಗಳಿವೆ.

ಸಪ್ತಮಾತೃಕೆಯರಾದ ವೈಷ್ಣವಿ, ಇಂದ್ರಾಣಿ, ಮಹೇಶ್ವರಿ, ಕುಮಾರಿ, ಬ್ರಾಹ್ಮೀದೇವಿ, ವರಾಹಿ ಮತ್ತು ಚಾಮುಂಡಿ ವಾರಣಾಸಿ ಕಡೆಯಿಂದ ದಕ್ಷಿಣದ ಕಡೆಗೆ ವಿಹಾರಕ್ಕೆ ಬಂದಿದ್ದರು. ಆಗ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆಸಲು ನಿರ್ಧರಿಸಿದ್ದರು, ಆಗಿನಿಂದ ಹಾಸನ ಎಂದು ವರ್ಣಿಸಲಾಗಿದೆ. ವೈಷ್ಣವಿ, ಕುಮಾರಿ, ಮಹೇಶ್ವರಿಯರು ಹಾಸನಾಂಬ ದೇವಾಲಯದಲ್ಲಿ ಹುತ್ತದ ರೂಪದಲ್ಲಿ ಹಾಗೂ ಬ್ರಾಹ್ಮೀದೇವಿಯು ಕೆಂಚಮ್ಮನ ಹೊಸಕೋಟೆಯಲ್ಲಿ ನೆಲೆಸಿದಳು. ಇನ್ನುಳಿದ ದೇವತೆಯರಾದ ಚಾಮುಂಡಿ, ವರಾಹಿ, ಇಂದ್ರಾಣಿ ನಗರ ಮಧ್ಯ ಭಾಗದ ದೇವಿಗೆರೆಯ ಬಳಿ ನೆಲೆಸಿದರು ಎಂದು ನಮ್ಮ ಹಿರಿಯರ ನಂಬಿಕೆ ಆಗಿದೆ.

English summary
Hassanambe temple doors will open on October 13th. District administration making all kinds of preparations for 15 days Jatra Mahotsav, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X