• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಾಸನ ವಿಮಾನ ನಿಲ್ದಾಣ; ತುರ್ತು ಕಾಮಗಾರಿಗೆ ಶೀಘ್ರ ಅನುದಾನ

|
Google Oneindia Kannada News

ಹಾಸನ, ಮಾರ್ಚ್ 19: " ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತುರ್ತು ಕಾಮಗಾರಿಗಳಿಗೆ ಬೇಕಾಗಿರುವ ಅನುದಾನವನ್ನು ಶೀಘ್ರವಾಗಿ ಒದಗಿಸಲಾಗುವುದು" ಎಂದು ಇಂಧನ ಮತ್ತು ಮೂಲಭೂತ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಹೇಳಿದರು.

ಶುಕ್ರವಾರ ಅವರು ಹಾಸನ ಜಿಲ್ಲಾಧಿಕಾರಿಗಳು, ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಆದಷ್ಟು ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಾಗಾರಿ ಪ್ರಾರಂಭವಾಗಬೇಕಿದ್ದು, ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಶೀಘ್ರವಾಗಿ ಮಾಡುವಂತೆ ಸೂಚಿಸಿದರು.

Infographics: ಖಾಸಗಿ ಪಾಲಾಗಲಿವೆ ನಾಲ್ಕು ವಿಮಾನ ನಿಲ್ದಾಣಗಳುInfographics: ಖಾಸಗಿ ಪಾಲಾಗಲಿವೆ ನಾಲ್ಕು ವಿಮಾನ ನಿಲ್ದಾಣಗಳು

ಮೂಲಭೂತ ಸೌಕರ್ಯ ಇಲಾಖೆಯ ಸಹಾಯಕ ಕಾರ್ಯದರ್ಶಿ ವಿ. ಚೈತ್ರಾ ಮಾತನಾಡಿ, "ಹಾಲಿ 9 ಕಿ.ಮೀ. ವ್ಯಾಪ್ತಿಯಲ್ಲಿರುವ 35 ಮೀಟರ್ ವಿಸ್ತೀರ್ಣದ ಹೈಟೆನ್ಷನ್ ತಂತಿಗಳನ್ನು ಹಾಗೂ ಟವರ್‌ಗಳನ್ನು ತೆಗೆದು 17 ಕಿ.ಮೀ. ದೂರದಿಂದ ವಿದ್ಯುತ್ ಸಂಪರ್ಕ ವಿಸ್ತರಿಸಬೇಕಾಗಿದೆ. ಇದಕ್ಕಾಗಿ ತಗಲುವ ವೆಚ್ಚವನ್ನು ಇಲಾಖೆಯಿಂದ ಒದಗಿಸಿ ಕೊಡಬೇಕಾಗಿದ್ದು, ಭೂ ಪರಿಹಾರ ಧನ ಬಿಡುಗಡೆ ಆದಷ್ಟು ಬೇಗ ಮಾಡಲಾಗುವುದು" ಎಂದರು.

ಹಾಸನ ವಿಮಾನ ನಿಲ್ದಾಣ ಜಾಗದ; ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆಹಾಸನ ವಿಮಾನ ನಿಲ್ದಾಣ ಜಾಗದ; ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆ

ರಸ್ತೆಗಳ ಅಭಿವೃದ್ಧಿ; ಹಾಸನ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಡಿಕೊಡುವಂತೆ ಕೋರಲಾಗಿದೆ. ವಿದ್ಯುತ್ ಮಾರ್ಗ ಬದಲಾವಣೆಗೆ ಪರಿಹಾರ ನೀಡಿದ ನಂತರ ರೈತರು ತಮ್ಮ ಜಮೀನನ್ನು ನಿಡುವುದಾಗಿ ತಿಳಿಸಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

 KIAL-ಮಧ್ಯ ಏಷ್ಯಾದಲ್ಲೇ ಶ್ರೇಷ್ಠ ವಿಮಾನ ನಿಲ್ದಾಣ KIAL-ಮಧ್ಯ ಏಷ್ಯಾದಲ್ಲೇ ಶ್ರೇಷ್ಠ ವಿಮಾನ ನಿಲ್ದಾಣ

   ಮಹಾರಾಷ್ಟ್ರದಿಂದ ಜಿಲ್ಲೆ ಸಂಪರ್ಕಿಸುವ ಎಲ್ಲಾ ಮಾರ್ಗದಲ್ಲಿ ಚೆಕ್‌ ಪೋಸ್ಟ್‌ ನಿರ್ಮಾಣ- ಜಿಲ್ಲಾಧಿಕಾರಿ ಪಿ ಸುನೀಲ್‌ ಕುಮಾರ್ ಮಾಹಿತಿ | Oneindia Kannada

   ಹಾಸನ ವಿಮಾನ ನಿಲ್ದಾಣ; ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದ ದಶಕಗಳ ಕನಸು. ನಗರದ ಹೊರವಲಯದ ಬೂವನಹಳ್ಳಿ ಬಳಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 2007ರಲ್ಲಿ 1,200 ಕೋಟಿ ರೂ.ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಶಂಕು ಸ್ಥಾಪನೆ ಮಾಡಲಾಯಿತು. ಆದರೆ, ಬಳಿಕ ಯಾವುದೇ ಕಾಮಗಾರಿಗಳು ನಡೆಯಲಿಲ್ಲ.

   English summary
   Fund will release for Hassan airport urgent work soon. Project work will began after the shifting of electrical polls near land marked for Hassan airport.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X