ಹಾಸನದಲ್ಲಿ ವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಖಂಡನೆ

By: ಹಾಸನ ಪ್ರತಿನಿಧಿ
Subscribe to Oneindia Kannada

ಹಾಸನ, ಜನವರಿ 4 : ಹಾಸನದ ಹಿಮ್ಸ್ ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಿಮ್ಸ್ ನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆಯಾಗಿರುವ ದೃಶ್ಯ ಸೆರೆಯಾಗಿದೆ.

ರೋಗಿಗಳ ಕಡೆಯವರು ಡಿ.31ರಂದು ವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಟ್ರೆಚರ್ ನೀಡಲಿಲ್ಲವೆಂಬ ಕಾರಣಕ್ಕೆಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ರೋಗಿ ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದರು. ಆ ಕೋಪವನ್ನುವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುವ ಮೂಲಕ ತೀರಿಸಿಕೊಳ್ಳಲಾಗಿದೆ.

Hassan assault on medical students: Condemnation

ವೈದ್ಯ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ ವೈದ್ಯರುಗಳ ತಂಡ ಖಂಡಿಸಿದ್ದು, ಸುಮಾರು 4೦೦ ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಕಪ್ಪು ಪಟ್ಟಿಯನ್ನು ಧರಿಸಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮಾಹಿತಿ ನೀಡಿದ ವೈದ್ಯ ವಿದ್ಯಾರ್ಥಿಗಳ ಮುಖಂಡ ಅನುದೀಪ್ ಈ ಘಟನೆಯನ್ನು ರಾಜ್ಯವ್ಯಾಪಿ ಖಂಡಿಸಲು ಹೇಳಲಾಗುವುದು.

ಬುಧವಾರ 4೦೦ ಕ್ಕೂ ಹೆಚ್ಚು ವೈದ್ಯರು ಘಟನೆ ಖಂಡಿಸಿ ಪ್ರತಿಭಟಿಸಿದ್ದು, ಇದುವರೆಗೂ ತಪ್ಪಿತಸ್ಥರ ವಿರುದ್ಧ ಯಾರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Hassan assault on medical students, medical students protest agenest that incident and Condemnation.
Please Wait while comments are loading...