ಹಾಸನ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ಹೀಗಿದೆ, ಇಲ್ಲಿದೆ ವಿವರ
ಹಾಸನ, ಮೇ, 13: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಹಾಗೆಯೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶವೂ ಹೊರಬಿದ್ದಿದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲುವು ಸಾಧಿಸಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರು 85,176 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಇವರಿಗೆ ಭಾರಿ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಅವರು 77,322 ಮತಗಳನ್ನು ಪಡೆಯುವ ಮೂಲಕ ಸೋಲುಂಡಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ 4,305, ಎಎಪಿ ಅಭ್ಯರ್ಥಿ ಅಗಿಲೆ ಯೋಗೇಶ್ 1,301 ಮತಗಳನ್ನು ಪಡೆದು ಸುಸ್ತು ಹೊಡೆದಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು 86,401 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇನ್ನು ಇವರಿಗೆ ಬಿಗ್ ಫೈಟ್ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 83,747 ಮತಗಳನ್ನು ಪಡೆಯುವ ಮೂಲಕ ಸೋಲುಂಡಿದ್ದಾರೆ. ಹಾಗೆಯೆ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ 46,66 ಮತಗಳನ್ನು ಮಾತ್ರ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಕೆ.ಸುರೇಶ್ 63,571 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇನ್ನುಇವರಿಗ ಫೈಟ್ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಶಿವರಾಮ್ 55,835 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ 38,893 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.
ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು 67,499 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇವರಿಗೆ ಫೈಟ್ ನೀಡಿದ್ದ ಪಕ್ಷೇತರ ಅಭ್ಯರ್ಥಿ ಕೃಷ್ಣೇಗೌಡ 48,620 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.ಇನ್ನು ಕಾಂಗ್ರೆಸ್ ಅಭ್ಯರ್ಥಿ ಶ್ರೀಧರ್ ಗೌಡ 33,084 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಯೋಗಾರಮೇಶ್ 18,477 ಮತಗಳಿಗೆ ತೃಪ್ತಿಪಟ್ಟಿದ್ದಾರೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು 58,604 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ. ಇವರಿಗೆ ಫೈಟ್ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿ 56,548 ಮತಗಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ 42,811 ಮತಗಳಿಗೆ ತೃಪ್ತಿಪಟ್ಟಿದ್ದಾರೆ.
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೌಡ 97,099 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ್ 77,006 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಹಾಗೆಯೆ ಬಿಜೆಪಿ ಅಭ್ಯರ್ಥಿ ಜಿವಿಟಿ ಬಸವರಾಜ್ 6,456 ಮತಗಳನ್ನು ಪಡೆದು ಮೂರನೇ ಸ್ಥಾನ ಅಲಂಕರಿಸಿದ್ದಾರೆ.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ 85,668 ಮತಗಳನ್ನು ಪಡೆದು ಗಲುವು ಸಾಧಿಸಿದ್ದಾರೆ. ಇವರಿಗೆ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ 79,023 ಮತಗಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಚಿದಾನಂದ್ 5,648 ಮತಗಳಿಗೆ ತೃಪ್ತಿಪಟ್ಟಿದ್ದಾರೆ.












Click it and Unblock the Notifications