ಮನೆಯಲ್ಲೆ ಆತ್ಮಹತ್ಯೆಗೆ ಯತ್ನಿಸಿದ ಹಾಸನ ಎಸಿ ವಿಜಯಾ

Written By:
Subscribe to Oneindia Kannada

ಹಾಸನ, ಜುಲೈ, 21: ಹಾಸನದ ಉಪವಿಭಾಗಾಧಿಕಾರಿ ವಿಜಯಾ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಗುರುವಾರ ಸಂಜೆ ಬೆಳಕಿಗೆ ಬಂದಿದೆ.

ಅಸ್ವಸ್ಥ ವಿಜಯಾ ಅವರನ್ನು ಹಾಸನ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಅಧಿಕಾರಿಗಳ ಮತ್ತು ರಾಜಕಾರಣಿಗಳ ಒತ್ತಡವೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂದು ಹೇಳಲಾಗಿದೆ. ಹಾಸನದ ತಮ್ಮ ನಿವಾಸದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ವಿಜಯಾ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾರೆ.[ವಿಜಯನಗರ ಪಿಎಸ್ ಐ ರೂಪಾ ಆತ್ಮಹತ್ಯೆ ಯತ್ನ ಮಾಡಿದ್ದು ಯಾಕೆ?]

suicide

ವಿಜಯಾ ಅವರನ್ನು ಇತ್ತೀಚೆಗೆ ಹಾಸನ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಹಿಮ್ಸ್)ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ವಿಜಯಾ ಉಪವಿಭಾಗಾಧಿಕಾರಿಯಾಗಿಯೇ ಕೆಲಸದಲ್ಲಿ ಮುಂದುವರಿದಿದ್ದರು. ಇವರ ವಿರುದ್ಧ ಪ್ರತಿಭಟನೆಗಳು ಸಹ ನಡೆದಿದ್ದವು.[ ಸಮೂಹ ಸನ್ನಿಯಾಗುತ್ತಿದೆಯೇ ಅಧಿಕಾರಿಗಳ ಆತ್ಮಹತ್ಯೆ?]

ಡಿವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಟೈಮ್ ಲೈನ್

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ, ವಿಜಯಾ ಆತ್ಮಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳವೇ ಕಾರಣ. ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪ್ರಕರಣದ ನಂತರ ಜೆಡಿಎಸ್ ಕಾರ್ಯಕರ್ತರು ಹಾಸನದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Hassan: One more shocking incident has taken place in Hassan. Hassan Assistant Commissioner(KAS) Vijaya attempted to suicide on 21 July 2016. Vijaya is currently admitted to Hassan District hospital and getting treatment.
Please Wait while comments are loading...