ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ: ಹಾಸನದ ಪ್ರೀತಂ ಗೌಡ ಕನ್‌ಫ್ಯೂಸಿಂಗ್ ಸ್ಟೇಟ್‌ಮೆಂಟ್
ಹಾಸನ, ಏಪ್ರಿಲ್ 27: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರು ಮತದಾರರನ್ನು ಕನ್‌ಫ್ಯೂಸ್ ಮಾಡುವ ಹೇಳಿಕೆಯೊಂದನ್ನು ನೀಡಿದ್ದಾರೆ. ಜೆಡಿಎಸ್‌ಗೆ ಮತ ಹಾಕಿದರೆ, ಬಿಜೆಪಿಗೆ ಮತ ಹಾಕಿದಂತೆ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸಾರ್ವಜನಿಕೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ನಿಮ್ಮ ತಿಳುವಳಿಕೆಗಾಗಿ ಹೇಳುತ್ತಿದ್ದೇನೆ. ಜೆಡಿಎಸ್‌ಗೆ ಮತ ಹಾಕುವುದು ಬಿಜೆಪಿಗೆ ಮತ ಹಾಕುವುದಲ್ಲದೆ ಬೇರೇನೂ ಅಲ್ಲ ಎಂಬುದಾಗಿ ನಾನು ಸ್ಪಷ್ಟಪಡಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಏಕೆಂದರೆ ಅವರು ( ಜೆಡಿಎಸ್ ) ಕೇವಲ 20-25 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಪ್ರಿತಂ ಗೌಡ ತಿಳಿಸಿದ್ದಾರೆ.
ಮತದಾರರು ಹಾಸನದಿಂದ ಮೈಸೂರು ಮಾರ್ಗವಾಗಿ ಬೆಳ್ಳೂರು ಕ್ರಾಸ್ ಮೂಲಕ ನೇರವಾಗಿ ಬೆಂಗಳೂರಿಗೆ ತೆರಳುವಂತೆ ಮನವಿ ಮಾಡಿದರು. 'ಬೆಂಗಳೂರು ತಲುಪಲು ನೀವು ಮೈಸೂರು ಮಾರ್ಗವನ್ನು ತೆಗೆದುಕೊಳ್ಳಿ. ಅದು ನಿಮ್ಮ ಬಯಕೆಯಾಗಿರಬೇಕು. ಹೇಗೆ ಸಾಗಿದರೂ, ಅಂತಿಮವಾಗಿ ಎಲ್ಲಾ ನದಿಗಳು ಸಮುದ್ರದಲ್ಲಿ ಕೊನೆಗೊಳ್ಳಬೇಕು' ಎಂದು ಪ್ರೀತಂ ಗೌಡ ಹೇಳಿದ್ದಾರೆ. ಜನರು ಜೆಡಿಎಸ್ (ಎಸ್) ಮಾರ್ಗವನ್ನು ತೆಗೆದುಕೊಳ್ಳುವ ಬದಲು ಬಿಜೆಪಿಗೆ ಮತ ಹಾಕುವಂತೆ ಅವರು ಪರೋಕ್ಷವಾಗಿ ಸಲಹೆ ನೀಡಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೇವಣ್ಣ ಅವರ ಕುಟುಂಬ ಸದಸ್ಯರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮತ್ತೆ ಗೆಲ್ಲಿಸಲು ಈ ತಂತ್ರ ರೂಪಿಸಿದ್ದಾರೆ ಎಂದು ಪ್ರೀತಂ ಗೌಡ ಹೇಳಿದ್ದಾರೆ.

ಏಪ್ರಿಲ್ 27 ರಂದು ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಪ್ರೀತಂ ಗೌಡ, 'ರೇವಣ್ಣ ಅವರು ಸ್ವರೂಪ್ ಯಾರೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಆದರೆ, ಇದ್ದಕ್ಕಿದ್ದಂತೆ, ಕುಟುಂಬದ ಎಲ್ಲರೂ ಆತನ ಪರವಾಗಿ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ. ಈಗ ಜೆಡಿಎಸ್ ಅಭ್ಯರ್ಥಿಯನ್ನು ಅವರ ಪುತ್ರ ಎಂದೇ ಕರೆಯುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರು 2024 ರಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕಾಗಿರುವುದರಿಂದ ಪಕ್ಷದ ಕಾರ್ಯಕರ್ತರ ಅಭಿಮಾನವನ್ನು ಉಳಿಸಿಕೊಳ್ಳುವ ತಂತ್ರದ ಭಾಗವಾಗಿ ಇದನ್ನು ಮಾಡುತ್ತಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಜೆಡಿಎಸ್ ನಾಯಕರ ತಂತ್ರಗಾರಿಕೆಯನ್ನು ಅರಿಯುವಷ್ಟು ಬುದ್ಧಿವಂತರು ಹಾಸನದ ಜನರಿದ್ದಾರೆ ಎಂದು ಪ್ರೀತಂ ಗೌಡ ಹೇಳಿದ್ದಾರೆ. ರೇವಣ್ಣ ಮತ್ತು ಅವರ ಮಗ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ಅವರನ್ನು ಏಕೆ ಕರೆತಂದರು ಎಂಬುದು ಜನರಿಗೆ ತಿಳಿದಿದೆ. ದತ್ತ ಮತ್ತೆ ಪಕ್ಷಕ್ಕೆ ಮರಳಿದ್ದಾರೆ. ಹಾಸನ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಅವರಿಗೆ ಸ್ಪಷ್ಟತೆ ಇದೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದಿದ್ದಾರೆ.
ಮಾಜಿ ಸಚಿವ ರೇವಣ್ಣ ಅವರು ಹೊಳೆನರಸೀಪುರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಹಿರಿಯ ಮಗ ಸೂರಜ್ ಎಂಎಲ್‌ಸಿ ಆಗಿದ್ದಾರೆ. ಕಿರಿಯ ಪುತ್ರ ಪ್ರಜ್ವಲ್ ಹಾಸನದ ಲೋಕಸಭಾ ಸದಸ್ಯರಾಗಿದ್ದಾರೆ. ರೇವಣ್ಣನವರ ಪತ್ನಿ ಭವಾನಿ ಅವರು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರೆಲ್ಲರೂ ಈಗ ಸ್ವರೂಪ್ ಪರ ಪ್ರಚಾರ ನಡೆಸುತ್ತಿದ್ದಾರೆ.

2018ರಲ್ಲಿ ಪ್ರಥಮ ಬಾರಿಗೆ ಬಿಜೆಪಿಯಿಂದ ಗೆದ್ದಿರುವ ಹಾಸನ ಶಾಸಕ ಪ್ರೀತಂ ಗೌಡ ಅವರಿಗೆ ತೀವ್ರ ಪೈಪೋಟಿ ಎದುರಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಚ್ ಸ್ವರೂಪ್ ಈ ಬಾರಿ ಅವರನ್ನು ಎದುರಿಸುತ್ತಿದ್ದಾರೆ.












Click it and Unblock the Notifications