ಹಾಸನದ ಸಂತ್ರಸ್ತರಿಗೆ ತಾತ್ಕಾಲಿಕ ವ್ಯವಸ್ಥೆ : ರೋಹಿಣಿ ಸಿಂಧೂರಿ

ಹಾಸನ, ಆಗಸ್ಟ್ 23: ಮಲೆನಾಡು ಪ್ರದೇಶದಲ್ಲಿ ನಿರಂತರವಾಗಿ ಸುರಿದ ಬಾರಿ ಮಳೆಯಿಂದಾಗಿ ಹಾನಿಗೀಡಾಗಿರುವ ಸಕಲೇಶಪುರ ತಾಲ್ಲೂಕಿನ ತಂಬಲಗಿರಿ, ಉಚ್ಚಂಗಿ, ಹಿಜ್ಜನಹಳ್ಳಿ, ಮಾಗೇರಿ, ಬಿಸಲೆ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವೀಕ್ಷಣೆ ನಡೆಸಿದರು.

ಈ ಪ್ರದೇಶದಲ್ಲಿ ಸಂಭವಿಸಿರುವ ಭೂಕುಸಿತವನ್ನು ಗಂಭೀರವಾಗಿ ಪರಿಗಣಿಸಿ ಅಪಾಯದಲ್ಲಿರುವ ಜನರಿಗೆ ಸ್ಪಂದಿಸಿ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗುವುದು ಎಂದರಲ್ಲದೆ, ಭೂಗರ್ಭ ಶಾಸ್ತ್ರಜ್ಞರೊಂದಿಗೆ ಚರ್ಚಿಸಿ ಅಪಾಯದ ಗಂಭೀರತೆ ಅರಿತು ಸೂಕ್ತ ವ್ಯವಸ್ಥೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಯವರು ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸೂಕ್ತ ರೀತಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ಉಪವಿಭಾಗಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮರಿಜ್ವಿ ಸುದರ್ಶನ್ ವಣಗೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಆನಂದ್, ತಹಸೀಲ್ದಾರ್ ಗಿರೀಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Hassan DC Rohini Sindhuri calls for proper arrangement to Flood Victims

ಮಹಾ ಮಳೆಯಿಂದಾಗಿ ಮಲೆನಾಡಿನಲ್ಲಿ ಹಾನಿಗೀಡಾಗಿರುವ ಸಕಲೇಶಪುರ ತಾಲ್ಲೂಕಿನ ಉಚ್ಚಂಗಿ, ಹಿಜ್ಜನಹಳ್ಳಿ, ಮಾಗೇರಿ, ಬಿಸಲೆ ಪ್ರದೇಶಗಳಿಗೆ ಮೊದಲಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಭೇತಿ ನೀಡಿ, ಪರಿಶೀಲನೆ ಮಾಡಿದರು.

ಗುಡ್ಡಗಳು ಕುಸಿದಿದ್ದು, ರಸ್ತೆಗಳು ಹಾನಿಗೀಡಾಗಿವೆ ಜನರು ಸಂಕಷ್ಟಕೆ ಸಿಲುಕಿದ್ದಾರೆ. ಆಸ್ತಿಪಾಸ್ತಿಗಳು ನಷ್ಟವಾಗಿವೆ. ಈ ಹಿನ್ನಲೆಯಲ್ಲಿ ಜನರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗಿದೆ ಪ್ರಧಾನಮಂತ್ರಿ ಅವರೊಂದಿಗೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಕಾಫಿ ಬೆಳೆ ನಷ್ಟವಾಗಿದ್ದು, ಪರಿಹಾರಕ್ಕೆ ಕೇಂದ್ರ ಸರ್ಕಾರದ ಜೊತೆಗೆ ಮಾತನಾಡುವುದಾಗಿ ಅವರು ತಿಳಿಸಿದರು. ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದ ಅವರು ಸಾರ್ವಜನಿಕರು ಕೂಡ ಸ್ಪಂದಿಸುವಂತೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+