ಕಡತಗಳನ್ನು ವಿಲೇವಾರಿಗೊಳಿಸುವಂತೆ ರೋಹಿಣಿ ಸಿಂಧೂರಿ ಖಡಕ್ ಸೂಚನೆ
ಹಾಸನ ಅಕ್ಟೋಬರ್ 23 : ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಮುಂದಕ್ಕೆ ಹೋಗದೇ ಧೂಳಿಡಿದಿರುವ ಕಡತಗಳನ್ನು ಶೀಘ್ರ ವಿಲೇವಾರಿಗೊಳಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನ್ಯಾಯಾಲಯ ಪ್ರಕರಣಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಶಾಖೆಯ ಕಡತಗಳಲ್ಲಿ ಶೇಕಡಾ 80 ರಷ್ಟನ್ನು ಈ ತಿಂಗಳ ಅಂತ್ಯಕ್ಕೆ ವಿಲೇವಾರಿಗೊಳಿಸುವಂತೆ ಸೋಮವಾರ ನಡೆದ ಕಚೇರಿಯ ಕಡತ ವಿಲೇವಾರಿ ಸಭೆಯಲ್ಲಿ ರೋಹಿಣಿ ಸಿಂಧೂರಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಡತ ವಿಲೇವಾರಿಗೆ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಎಚ್ಚರಿಸಿದರು.
ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವ ರೋಹಿಣಿ ಸಿಂಧೂರಿ ಅವರು, ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಅಪ್ಲಿಕೇಷನ್ ಎಂ -ಆಸ್ತಿ ಅಪ್ಲಿಕೇಷನ್ ಹೊರ ತಂದಿರುವುದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications