ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ!

Posted By: Gururaj
Subscribe to Oneindia Kannada

ಹಾಸನ, ಏಪ್ರಿಲ್ 18 : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶವನ್ನು ಸಿಎಟಿ ಎತ್ತಿ ಹಿಡಿದಿದೆ. ವರ್ಗಾವಣೆ ವಿಚಾರದಲ್ಲಿ ರೋಹಿಣಿ ಸಿಂಧೂರಿ ಮತ್ತು ಕರ್ನಾಟಕ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿತ್ತು.

ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

2018ರ ಮಾರ್ಚ್ 7ರಂದು ಕರ್ನಾಟಕ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ಎ ಮಂಜುಗೆ ಮತ್ತೆ ನೋಟಿಸ್ ನೀಡಿದ ರೋಹಿಣಿ ಸಿಂಧೂರಿ

2017ರ ಜುಲೈ 14ರಂದು ಹಾಸನದ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರವಹಿಸಿಕೊಂಡಿದ್ದರು. ಅವಧಿಗೂ ಮೊದಲೇ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶವನ್ನು ಅವರು ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಸಿಎಟಿ ಈ ಅರ್ಜಿಯನ್ನು ವಜಾಗೊಳಿಸಿದೆ.

ಸಿಎಟಿ ನೀಡಿದ ತೀರ್ಪು ಏನು?

ಸಿಎಟಿ ನೀಡಿದ ತೀರ್ಪು ಏನು?

ಮಂಗಳವಾರ ಕೇಂದ್ರಿಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ. ಇದರಿಂದಾಗಿ ಸರ್ಕಾರ ಮತ್ತು ರೋಹಿಣಿ ಸಿಂಧೂರಿ ಅವರ ನಡುವಿನ ಹಗ್ಗ-ಜಗ್ಗಾಟ ಅಂತ್ಯಗೊಂಡಿದೆ.

ಮಧ್ಯಂತರ ತೆಡೆಯಾಜ್ಞೆ ನೀಡಿತ್ತು

ಮಧ್ಯಂತರ ತೆಡೆಯಾಜ್ಞೆ ನೀಡಿತ್ತು

2018ರ ಮಾರ್ಚ್ 7ರಂದು ಕರ್ನಾಟಕ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಮಾರ್ಚ್ 8ರಂದು ರೋಹಿಣಿ ಸಿಂಧೂರಿ ಸರ್ಕಾರದ ಆದೇಶವನ್ನು ಸಿಟಿಟಿಯಲ್ಲಿ ಪ್ರಶ್ನೆ ಮಾಡಿದ್ದರು.

ಅವಧಿಗೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ, ಈ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಎರಡು ಬಾರಿ ವರ್ಗಾವಣೆ ಆದೇಶಕ್ಕೆ ಸಿಎಟಿ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇಂದು ಈ ಕುರಿತು ಅಂತಿಮ ಆದೇಶ ನೀಡಿದ್ದು, ವರ್ಗಾವಣೆ ಆದೇಶ ಎತ್ತಿಹಿಡಿದಿದೆ.

ಸಿಎಟಿ ತೀರ್ಪು ಪ್ರಶ್ನಿಸಿದ್ದರು

ಸಿಎಟಿ ತೀರ್ಪು ಪ್ರಶ್ನಿಸಿದ್ದರು

ಕೇಂದ್ರಿಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ವರ್ಗಾವಣೆ ತಕರಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ರೋಹಿಣಿ ಸಿಂಧೂರಿ ಅವರಿಗೆ ಸೂಚಿಸಿ ಆದೇಶ ನೀಡಿತ್ತು.

ಆದರೆ, ಸಿಎಟಿಯ ಈ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ ಪ್ರಸಾದ್ ನೇತೃತ್ವದ ವಿಭಾಗೀಯ ಪೀಠ ಮಾರ್ಚ್ 27ರಂದು ಹೊಸದಾಗಿ ಅರ್ಜಿ ವಿಚಾರಣೆ ನಡೆಸುವಂತೆ ಸಿಎಟಿಗೆ ಸೂಚನೆ ನೀಡಿತ್ತು. ವರ್ಗಾವಣೆ ಆದೇಶಕ್ಕೆ ತಡೆ ನೀಡಿತ್ತು.

ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ

ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ

ಕರ್ನಾಟಕ ಹೈಕೋರ್ಟ್ ಆದೇಶದಂತೆ ಏಪ್ರಿಲ್ 2ರಂದು ಕೇಂದ್ರಿಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಹೊಸದಾಗಿ ರೋಹಿಣಿ ಸಿಂಧೂರಿ ಅವರ ಅರ್ಜಿಯ ವಿಚಾರಣೆಯನ್ನು ಆರಂಭಿಸಿತು. ಇಂದು ಈ ಕುರಿತು ಅಂತಿಮ ತೀರ್ಪು ನೀಡಿದೆ.

ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಹಾಸನ ಜಿಲ್ಲಾಧಿಕಾರಿಯಾಗಿ ಡಾ.ರಣದೀಪ್ ಅವರನ್ನು ನೇಮಕ ಮಾಡಲಾಗಿತ್ತು. ಈ ಆದೇಶದಿಂದಾಗಿ ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ವಾಗಲಿದ್ದಾರೆ.

ರಣದೀಪ್ ಅಂತ್ರರಾಗಿದ್ದರು

ರಣದೀಪ್ ಅಂತ್ರರಾಗಿದ್ದರು

ರೋಹಿಣಿ ಸಿಂಧೂರಿ ಮತ್ತು ಕರ್ನಾಟಕ ಸರ್ಕಾರದ ನಡುವಿನ ಜಟಾಪಟಿಯ ಕಾರಣದಿಂದಾಗಿ ಡಾ.ರಣದೀಪ್ ಅವರು ಅತಂತ್ರರಾಗಿದ್ದರು. ಮೈಸೂರಿಗೆ ಹೊಸ ಜಿಲ್ಲಾಧಿಕಾರಿ ನೇಮಕವಾದರೂ ರಣದೀಪ್ ಅವರಿಗೆ ಜಿಲ್ಲಾಧಿಕಾರಿಗಳ ನಿವಾಸ ಬಿಟ್ಟು ಹಾಸನಕ್ಕೆ ವರ್ಗಾವಣೆಗೊಳ್ಳಲು ಸಾಧ್ಯವಾಗಿರಲಿಲ್ಲ.

ಈಗ ಸಿಎಟಿ ಆದೇಶದಿಂದಾಗಿ ರಣದೀಪ್ ಅವರು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳ್ಳಲಿದ್ದಾರೆ. ರೋಹಿಣಿ ಸಿಂಧೂರಿ ರೋಹಿಣಿ ಸಿಂಧೂರಿ ಅವರು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ನೇಮಕಗೊಳ್ಳಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Central Administrative Tribunal (CAT) on April 17, 2018 dismissed the petition of Hassan Deputy Commissioner Rohini Sindhuri and up held the transfer order of Karnataka Government. On March 7, Rohini Sindhuri posted as commissioner of employment and training in Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ