ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

|
Google Oneindia Kannada News

ಬೆಂಗಳೂರು, ಮಾರ್ಚ್ 27 : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮುಖಭಂಗವಾಗಿದೆ. ಸಿಎಟಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು, ಮತ್ತೊಮ್ಮೆ ಅರ್ಜಿ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ ಪ್ರಸಾದ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ-12 ಮತದಾನ, ಮೇ-15 ಫಲಿತಾಂಶ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ-12 ಮತದಾನ, ಮೇ-15 ಫಲಿತಾಂಶ

ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶವನ್ನು ರದ್ದು ಪಡಿಸಿದರುವ ಹೈಕೋರ್ಟ್, ರೋಹಿಣಿ ಸಿಂಧೂರಿ ಅವರ ಅರ್ಜಿಯ ವಿಚಾರಣೆಯನ್ನು ಪುನಃ ನಡೆಸಬೇಕು ಎಂದು ಸೂಚಿಸಿದೆ.

Hassan DC Rohini Sindhuri transfer : HC directs for fresh hearing

ಏಪ್ರಿಲ್ 2ರಂದು ರೋಹಿಣಿ ಸಿಂಧೂರಿ ಅವರ ಪರ ವಕೀಲರು ಸಿಎಟಿ ಮುಂದೆ ವಾದ ಮಂಡನೆ ಮಾಡಬೇಕು. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶ ನೀಡಿದೆ.

ಚುನಾವಣೆ ಮುಗಿಯುವವರೆಗೆ ರೋಹಿಣಿ ಸಿಂಧೂರಿ ವರ್ಗಾವಣೆ ಅಸಾಧ್ಯಚುನಾವಣೆ ಮುಗಿಯುವವರೆಗೆ ರೋಹಿಣಿ ಸಿಂಧೂರಿ ವರ್ಗಾವಣೆ ಅಸಾಧ್ಯ

ಮಾರ್ಚ್ 7ರಂದು ಕರ್ನಾಟಕ ಸರ್ಕಾರ ರೋಹಿಣಿ ಸಿಂಧೂರಿ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಮಾರ್ಚ್ 8ರಂದು ರೋಹಿಣಿ ಸಿಂಧೂರಿ ಅವರು ಸಿಎಟಿಯಲ್ಲಿ ವರ್ಗಾವಣೆ ಆದೇಶವನ್ನು ಪ್ರಶ್ನೆ ಮಾಡಿದ್ದರು.

ಮಾ.21ರ ತನಕ ರೋಹಿಣಿ ಸಿಂಧೂರಿ ವರ್ಗಾವಣೆ ಇಲ್ಲಮಾ.21ರ ತನಕ ರೋಹಿಣಿ ಸಿಂಧೂರಿ ವರ್ಗಾವಣೆ ಇಲ್ಲ

ಸಿಎಟಿ ವರ್ಗಾವಣೆ ತಕರಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ರೋಹಿಣಿ ಸಿಂಧೂರಿ ಅವರಿಗೆ ಸೂಚಿಸಿತ್ತು. ಸಿಎಟಿ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅವಧಿಗೂ ಮೊದಲೇ ಕರ್ನಾಟಕ ಸರ್ಕಾರ ತಮ್ಮನ್ನು ವರ್ಗಾವಣೆ ಮಾಡಿದೆ. ಆದ್ದರಿಂದ, ವರ್ಗಾವಣೆ ಆದೇಶಕ್ಕೆ ತಡೆ ನೀಡಬೇಕು ಎಂದು ರೋಹಿಣಿ ಸಿಂಧೂರಿ ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದರು.

English summary
Karnataka High Court on March 27, 2018 directed Central Administrative Tribunal (CAT) for fresh hearing on Hassan Deputy Commissioner Rohini Sindhuri transfer petition. On March 7 Rohini Sindhuri posted as commissioner of employment and training in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X