ಹಾಸನ ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷ ಪರಿಚಯ
ಹಾಸನ, ಫೆಬ್ರವರಿ 22 : 'ಸರ್ಕಾರದ ಯೋಜನೆಗಳು ಸಕಾಲದಲ್ಲಿ ಅನುಷ್ಠಾನಗೊಳ್ಳಬೇಕು. ಜನಸಾಮಾನ್ಯರ ಸಂಕಷ್ಟಗಳನ್ನು ಸಮಾಧಾನದಿಂದ ಆಲಿಸಿ ಕೆಲಸ ಮಾಡಬೇಕಿದೆ' ಎಂದು ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ಶುಕ್ರವಾರ ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರು ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅಕ್ರಂ ಪಾಷ ಅವರು, 'ಲೋಕಸಭಾ ಚುನಾವಣೆ ಶೀಘ್ರದಲ್ಲಿ ಫೋಷಣೆಯಾಗಲಿದೆ. ಎಲ್ಲಾ ಪೂರ್ವ ತಯಾರಿ ನಡೆಸಿಕೊಳ್ಳಿ ಯಾವುದೇ ಲೋಪವಿಲ್ಲದಂತೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಂ ಪಾಷ ಅವರು 2012ನೇ ಬ್ಯಾಚ್ ಐಎಎಸ್ ಅಧಿಕಾರಿ. ಅಕ್ರಂ ಪಾಷ ಅವರು ಐದೂವರೆ ವರ್ಷಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ನೂತನ ಡಿಸಿ ಪರಿಚಯ ಚಿತ್ರಗಳಲ್ಲಿ.....

ತುಮಕೂರು ಜಿಲ್ಲೆಯವರು
2012ನೇ ಬ್ಯಾಚ್ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಕ್ರಂ ಪಾಷ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನವರು. 1994 ರಿಂದ 2006ರ ತನಕ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ರಾಜ್ಯ ಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೆಎಎಸ್ ಅಧಿಕಾರಿಯಾದರು
2006-07ನೇ ಸಾಲಿನಲ್ಲಿ ಅಕ್ರಂ ಪಾಷ ಅವರು ಕೆಎಎಸ್ ಅಧಿಕಾರಿಯಾಗಿ ನೇಮಕಗೊಂಡರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರೋಬೆಷನರಿ ಅಧಿಕಾರಿಯಾಗಿ ಕೆಲಸ ಆರಂಭಿಸಿದರು. ಬಳಿಕ 2007 ರಿಂದ 2009ರ ತನಕ ಮಡಿಕೇರಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ವಿವಿಧ ಹುದ್ದೆಗಳಲ್ಲಿ ಕೆಲಸ
2009-10ರಲ್ಲಿ ಚಿಕ್ಕಬಳ್ಳಾಪುರದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 2010 ರಿಂದ 11ರವರೆಗೆ ಅಲ್ಪಸಂಖ್ಯಾತರ ಹಾಗೂ ಹಜ್ ಮತ್ತು ವಕ್ತ್ ಸಚಿವರ ಅಪ್ತ ಕಾರ್ಯದರ್ಶಿಯಾಗಿ, 2011-13ರವರೆಗೆ ನಗರಾಡಳಿತ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸರ್ವೋತ್ತಮ ಪ್ರಶಸ್ತಿ ಪಡೆದಿದ್ದಾರೆ
ಕರ್ನಾಟಕ ರಾಜ್ಯ ವಕ್ತ್ ಮಂಡಳಿಯ ಸದಸ್ಯರಾಗಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಸರ್ವೋತಮ ಸೇವಾ ಪ್ರಶಸ್ತಿ ಪಡೆದಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಅಕ್ರಂ ಪಾಷ ಕೆಲಸ ಮಾಡುತ್ತಿದ್ದರು. ಈಗ ಹಾಸನ ಜಿಲ್ಲಾಧಿಕಾರಿಯಾಗಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications