ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷ ಪರಿಚಯ

|
Google Oneindia Kannada News

ಹಾಸನ, ಫೆಬ್ರವರಿ 22 : 'ಸರ್ಕಾರದ ಯೋಜನೆಗಳು ಸಕಾಲದಲ್ಲಿ ಅನುಷ್ಠಾನಗೊಳ್ಳಬೇಕು. ಜನಸಾಮಾನ್ಯರ ಸಂಕಷ್ಟಗಳನ್ನು ಸಮಾಧಾನದಿಂದ ಆಲಿಸಿ ಕೆಲಸ ಮಾಡಬೇಕಿದೆ' ಎಂದು ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಶುಕ್ರವಾರ ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರು ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು.

ರೋಹಿಣಿ ಸಿಂಧೂರಿ ವರ್ಗಾವಣೆರೋಹಿಣಿ ಸಿಂಧೂರಿ ವರ್ಗಾವಣೆ

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅಕ್ರಂ ಪಾಷ ಅವರು, 'ಲೋಕಸಭಾ ಚುನಾವಣೆ ಶೀಘ್ರದಲ್ಲಿ ಫೋಷಣೆಯಾಗಲಿದೆ. ಎಲ್ಲಾ ಪೂರ್ವ ತಯಾರಿ ನಡೆಸಿಕೊಳ್ಳಿ ಯಾವುದೇ ಲೋಪವಿಲ್ಲದಂತೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಮೌಂಟ್ ಕಾರ್ಮೆಲ್ ವಿದ್ಯಾರ್ಥಿ ಈಗ ಧಾರವಾಡ ಡಿಸಿಬೆಂಗಳೂರು ಮೌಂಟ್ ಕಾರ್ಮೆಲ್ ವಿದ್ಯಾರ್ಥಿ ಈಗ ಧಾರವಾಡ ಡಿಸಿ

ಅಕ್ರಂ ಪಾಷ ಅವರು 2012ನೇ ಬ್ಯಾಚ್‍ ಐಎಎಸ್ ಅಧಿಕಾರಿ. ಅಕ್ರಂ ಪಾಷ ಅವರು ಐದೂವರೆ ವರ್ಷಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ನೂತನ ಡಿಸಿ ಪರಿಚಯ ಚಿತ್ರಗಳಲ್ಲಿ.....

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ ಭಾಸ್ಕರ್‌ ನೇಮಕಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ ಭಾಸ್ಕರ್‌ ನೇಮಕ

ತುಮಕೂರು ಜಿಲ್ಲೆಯವರು

ತುಮಕೂರು ಜಿಲ್ಲೆಯವರು

2012ನೇ ಬ್ಯಾಚ್‍ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಕ್ರಂ ಪಾಷ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನವರು. 1994 ರಿಂದ 2006ರ ತನಕ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ರಾಜ್ಯ ಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೆಎಎಸ್ ಅಧಿಕಾರಿಯಾದರು

ಕೆಎಎಸ್ ಅಧಿಕಾರಿಯಾದರು

2006-07ನೇ ಸಾಲಿನಲ್ಲಿ ಅಕ್ರಂ ಪಾಷ ಅವರು ಕೆಎಎಸ್ ಅಧಿಕಾರಿಯಾಗಿ ನೇಮಕಗೊಂಡರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರೋಬೆಷನರಿ ಅಧಿಕಾರಿಯಾಗಿ ಕೆಲಸ ಆರಂಭಿಸಿದರು. ಬಳಿಕ 2007 ರಿಂದ 2009ರ ತನಕ ಮಡಿಕೇರಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ವಿವಿಧ ಹುದ್ದೆಗಳಲ್ಲಿ ಕೆಲಸ

ವಿವಿಧ ಹುದ್ದೆಗಳಲ್ಲಿ ಕೆಲಸ

2009-10ರಲ್ಲಿ ಚಿಕ್ಕಬಳ್ಳಾಪುರದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 2010 ರಿಂದ 11ರವರೆಗೆ ಅಲ್ಪಸಂಖ್ಯಾತರ ಹಾಗೂ ಹಜ್ ಮತ್ತು ವಕ್ತ್ ಸಚಿವರ ಅಪ್ತ ಕಾರ್ಯದರ್ಶಿಯಾಗಿ, 2011-13ರವರೆಗೆ ನಗರಾಡಳಿತ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸರ್ವೋತ್ತಮ ಪ್ರಶಸ್ತಿ ಪಡೆದಿದ್ದಾರೆ

ಸರ್ವೋತ್ತಮ ಪ್ರಶಸ್ತಿ ಪಡೆದಿದ್ದಾರೆ

ಕರ್ನಾಟಕ ರಾಜ್ಯ ವಕ್ತ್‌ ಮಂಡಳಿಯ ಸದಸ್ಯರಾಗಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಸರ್ವೋತಮ ಸೇವಾ ಪ್ರಶಸ್ತಿ ಪಡೆದಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಅಕ್ರಂ ಪಾಷ ಕೆಲಸ ಮಾಡುತ್ತಿದ್ದರು. ಈಗ ಹಾಸನ ಜಿಲ್ಲಾಧಿಕಾರಿಯಾಗಿದ್ದಾರೆ.

English summary
2012 batch IAS officer Akram Pasha took charge as Deputy Commissioner of Hassan. On February 22, 2019 Karnataka Governament transferred Hassan DC Rohini Sindhuri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X