• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಾಸನ ಜಿಲ್ಲೆಯಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್

|
Google Oneindia Kannada News

ಹಾಸನ, ಮೇ 18: ಕೊರೊನಾ ವೈರಸ್‌ನ ತೀವ್ರತೆಯನ್ನು ಕಟ್ಟಿಹಾಕಲು ಹಾಸನ ಜಿಲ್ಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಮಾಡಲಾಗಿದೆ. ಜಿಲ್ಲೆಯಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಮಾಹಿತಿಯನ್ನು ನೀಡಿದ್ದಾರೆ.

ಸದ್ಯ ರಾಜ್ಯ ಸರ್ಕಾರ ಮಾಡಿರುವ ಲಾಕ್‌ಡೌನ್‌ನಲ್ಲಿ ನಿತ್ಯವೂ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ಸಾಮಾಗ್ರಿಗಳನ್ನು ಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಹಾಸನದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತುಗಳಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶವನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದರು. ಕರ್ನಾಟಕದ 17 ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿಗಳು ಲಾಕ್‌ಡೌನ್ ಮಾಡುವ ನಿರ್ಧಾರವನ್ನು ಜಿಲ್ಲಾಧಿಕಾರಿಗಳ ಹೆಗಲಿಗೆ ವಹಿಸಿದರು. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಅರಿವಿರುತ್ತದೆ. ಹೀಗಾಗಿ ಪರಿಸ್ಥಿತಿಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.

   ಲಾಕ್ ಡೌನ್ ಹಿನ್ನಲೆ ಕೆ.ಆರ್ ಮಾರ್ಕೆಟ್ ನಲ್ಲಿ ಜನ ಸಂಚಾರ ವಿರಳ | Oneindia Kannada

   ಈ ಸಭೆಯ ಬಳಿಕ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಘೋಷಣೆಯನ್ನು ಮಾಡಿದ್ದಾರೆ. ಕೊರೊನಾ ಪ್ರಕತಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೀಗಾಗಿ ಜನರು ಸಹಕಾರವನ್ನು ನೀಡಬೇಕೆಂದು ಗೋಪಾಲಯ್ಯ ಮನವಿ ಮಾಡಿದ್ದಾರೆ.

   English summary
   Hassan district 4 days complete lockdown, allow to open shops only 3 days in week. K Gopalaiah.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X