Hassan News: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು; ಸರ್ಕಾರ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?
Hassan Heart Attack Cases: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸಿ ಆತಂಕ ಸೃಷ್ಟಿಸಿದೆ. ಇದರಿಂದ ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ತೆಗೆದುಕೊಂಡ ನಿರ್ಧಾರ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂದು (ಜೂನ್ 30) ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೂವರು ಸಾವನ್ನಪ್ಪಿದ್ದಾರೆ. ಈ ಮೂಲಕ 40 ದಿನದ ಅಂತರದಲ್ಲಿ 21 ಜನರು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದು, ಹಾಸನದಲ್ಲಿನ ಸರಣಿ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದ್ದಾರೆ.

18 ಸಾವಿನ ಪೈಕಿ 9 ಜನರು ಸಾವನ್ನಪ್ಪಿದ್ದವರು 55 ವರ್ಷ ಮೇಲ್ಪಟ್ಟವರಾಗಿದ್ದಾರೆ. ಅವರಿಗೆ ಬೇರೆ ಬೇರೆ ರೀತಿಯ ಖಾಯಿಲೆಗಳು ಇತ್ತು. 5 ಜನ 20 ಹರೆಯದವರು ಎಂದು ತಿಳಿದಿದೆ. 1 ಸಾವು ಹಾಸನದಲ್ಲಿ ಆಗಿದೆ. ಯಳಿದ 4 ಸಾವು ಬೆಂಗಳೂರಿನಲ್ಲಿ ಆಗಿದೆ. ಆದರೆ, 4 ಜನ ಹಾಸನ ಮೂಲದವರಾಗಿದ್ದಾರೆ. ಟೈಪ್ 1 ಡಯಾಬಿಟಿಸ್ ಇತ್ತು, ಕ್ರಾನಿಲ್ ಡಿಸೀಸ್ ಇತ್ತು. ಬಹುಪಾಲು ಸಾವು ಮನೆಯಲ್ಲಿ ಸಂಭವಿಸಿದೆ. ಆದ್ದರಿಂದ ಹಳೇ ಮೆಡಿಕಲ್ ರೆಕಾರ್ಡ್ ಪರೀಕ್ಷಿಸಬೇಕಿದೆ. 9 ಸಾವಿನ ಬಗ್ಗೆ ತಿಳಿಯಲು ಕಮಿಟಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಫೆಬ್ರವರಿ ತಿಂಗಳಲ್ಲಿ ಈ ಸಮಿತಿ ರಚನೆ ಆಗಿತ್ತು. ಕೋವಿಡ್‌ನಿಂದ ಹೀಗಾಗಿದೆಯಾ ಎಂಬ ಮಾಹಿತಿ ಬಗ್ಗೆ ಅಧ್ಯಯನ ನಡೆಸಿದೆ. ಅದೇ ಕಮಿಟಿಗೆ ಹಾಸನದ ಮೆಡಿಕಲ್ ರಿಪೋರ್ಟ್ ತರಿಸಿ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇವೆ. 10 ದಿನಗಳ ಒಳಗಾಗಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು.
20 ವರ್ಷದ ಯುವತಿಗೆ ಟೈಪ್ 1 ಡಯಾಬಿಟಿಸ್, ಕ್ರಾನಿಕ್ ಕಿಡ್ನಿ ಡಿಸೀಸ್ ಇರುವುದಯ ತಿಳಿದಿದೆ. ಜನಟಿಕ್ ಇದೆಯಾ, ಅನ್ ಕಂಟ್ರೋಲ್ಡ್ ಡಿಸೀಸ್ ಇತ್ತಾ ಎಂದು ಅಧ್ಯಯನ ಮಾಡಬೇಕಿದೆ. ಹಾಸನ ಸಾವಿನಲ್ಲಿ ಕೆಲವರಿಗೆ ಒಪನ್ ಹಾರ್ಟ್ ಸರ್ಜರಿ ಆಗಿತ್ತು. 18 ಪೈಕಿ 2 ಮಾತ್ರ ಆಸ್ಪತ್ರೆಯಲ್ಲಿ ಸಾವಾಗಿದೆ. ಇನ್ನುಳಿದವರ ಸಾವುಗಳು ಮನೆಯಲ್ಲಿ ಆಗಿವೆ ಎಂದು ತಿಳಿಸಿದರು.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕ್ರಿಯಿಸಿ, ಯಾಕಿಷ್ಟು ಹೃದಯಾಘಾತವಾಗುತ್ತಿದೆ ಎನ್ನುವುದರ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ವರದಿ ನೀಡಲು ಆದೇಶಿಸಿದ್ದೇನೆ. ಅಧಿಕಾರಿಗಳು ನೀಡುವ ವರದಿ ನೀಡಿ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.
ಸತ್ಯಾಸತ್ಯತೆ ಏನೆಂದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್, ಡಿಜಿಟಲ್ ವ್ಯಸನ, ವ್ಯಸನದಿಂದ ಆರೋಗ್ಯ ಸಮಸ್ಯೆ ಹೆಚ್ಚಳ ಆಗಿದೆ. ಹಲವರಿಗೆ ಚಿಕ್ಕ ವಯಸ್ಸಿನಲ್ಲೇ ಬಿಪಿ, ಶುಗರ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲೆಡೆ ವಾಯು, ಆಹಾರ, ನೀರು ಮಾಲಿನ್ಯದಿಂದ ಕೂಡಿದೆ. ಜೀವನ ಶೈಲಿ ನೋಡಿಕೊಳ್ಳುವುದು ತುಂಬಾ ಮುಖ್ಯವಾಗಿದೆ ಎಂದು ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications