ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತನ ಮನೆ ಮೇಲೆ ಐಟಿ ದಾಳಿ

|
Google Oneindia Kannada News

ಹಾಸನ, ಫೆಬ್ರವರಿ 12: ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ."

ರೇವಣ್ಣ ಅವರ ಆಪ್ತ ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿ ನೆಲೆಸಿರುವ ಶಿವಕುಮಾರ್ ವಿರುದ್ಧ ದೂರು ಬಂದಿತ್ತು. ದೂರಿನ ಅನ್ವಯ ಶಿವಕುಮಾರ್ ನಿವಾಸದ ಮೇಲೆ ಮಂಗಳವಾರದಂದೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರದಂದು ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇಡಿಯಿಂದ ಎಂಟು ತಾಸಿಗೂ ಹೆಚ್ಚು ಕಾಲ ಡಿಕೆಶಿ ತಾಯಿ ಗೌರಮ್ಮ ವಿಚಾರಣೆಇಡಿಯಿಂದ ಎಂಟು ತಾಸಿಗೂ ಹೆಚ್ಚು ಕಾಲ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

ಶಿವಕುಮಾರ್ ಅವರ ನಿವಾಸದಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿ ತೆರಳಿದ್ದ ಅಧಿಕಾರಿಗಳು ಬುಧವಾರದಂದು ಹಾಸನದ ಬೇಲೂರು ರಸ್ತೆಯಲ್ಲಿರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

Hassan: IT Raid on H.D Revanna aide Shivakumar

ಎಚ್.ಡಿ. ರೇವಣ್ಣ ಅವರ ಆಪ್ತರಾಗಿರುವ ಶಿವಕುಮಾರ್ ಗುತ್ತಿಗೆದಾರರೂ ಆಗಿದ್ದು, ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಜೆಡಿಎಸ್ ಮುಖಂಡರಾದ ಎಚ್ ಡಿ ರೇವಣ್ಣ ಮತ್ತು ಸಿ ಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ದಾಳಿ ನಡೆಸುವ ಮೂಲಕ ಚುನಾವಣೆಗೂ ಮುನ್ನ ಆದಾಯ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದರು. ಆ ಸಂದರ್ಭದಲ್ಲಿ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಲಾಗಿತ್ತು.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಪಾಪಣ್ಣಿ ಎಂಬುವವರ ಮನೆ ಮೇಲೆ, ,ಮಂಡ್ಯದ ಸಿಎಸ್ ಪುಟ್ಟರಾಜು ಆಪ್ತ ಜಿಪಂ ಸದಸ್ಯ ತಿಮ್ಮೇಗೌಡ ಜೊತೆಗೆ ಡಿಸಿಸಿ ಬ್ಯಾಂಕ್ ಹೊನ್ನವಳ್ಳಿ ಸತೀಶ್, ರೇವಣ್ಣ ಆಪ್ತ ಕಾರ್ಲೆ ಇಂದ್ರೇಶ್ ಮುಂತಾದವರ ಮನೆ ಮೇಲೆ ಒಟ್ಟು ಎಂಟು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

English summary
Hassan: IT Raid on H.D Revanna aide Shivakumar resident of Sangameshwar Layout in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X