Get Updates
Get notified of breaking news, exclusive insights, and must-see stories!

ಹಾಸನ: ಉದ್ಯೋಗಾಕಾಂಕ್ಷಿಗಳಿಗೆ ಯುವ ಕೌಶಲ್ಯ ಕಾರ್ಯಕ್ರಮ

ಹಾಸನ, ಫೆ,03: ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಯುವ ಕೌಶಲ್ಯ ಕಾರ್ಯಕ್ರಮವನ್ನು ಫೆ.4 ರಿಂದ 18 ರವರೆಗೆ ಹಾಸನ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳೊಂದಿಗೆ ಉದ್ಯೋಗ ಮಾರ್ಗದರ್ಶನ, ಸಮಾಲೋಚನೆ, ಮೃದುಕೌಶಲ್ಯ ತರಬೇತಿ ಮತ್ತು ಮೌಲ್ಯ ಮಾಪನ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಫೆ.4 ರಂದು ಚನ್ನರಾಯಪಟ್ಟಣದ ಪ್ರಥಮ ದರ್ಜೆ ಕಾಲೇಜು, ಫೆ.6 ರಂದು ಆಲೂರಿನ ಸರ್ಕಾರಿ ಕಾಲೇಜಿನಲ್ಲಿ, ಫೆ.7 ರಂದು ಅರಕಲಗೂಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹೊಳೆನರಸೀಪುರದ ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ, ಫೆ.11 ರಂದು ಸಕಲೇಶಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ, ಫೆ.12 ರಂದು ಬೇಲೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ, ಫೆ.13 ರಂದು ಅರಸೀಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ , ಫೆ.14 ರಂದು ಮತ್ತು ಹಾಸನದ ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಫೆ.18 ರಂದು ಕಾರ್ಯಕ್ರಮ ನಡೆಯಲಿದೆ.

Hassan: Kaushalya Jobs related Workshop from Feb 04 to 18

ವಯೋಮಿತಿ 18 ರಿಂದ 35 ವರ್ಷದೊಳಗಿನ ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ಗರಿಷ್ಠ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ತರಬೇತಿಗೆ ಬರುವ ಅಭ್ಯರ್ಥಿಗಳು ಎಲ್ಲಾ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಎರಡು ಭಾವಚಿತ್ರದೊಂದಿಗೆ ಹಾಜರಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಕೌಶಲ್ಕರ್.ಕಾಂ ನಲ್ಲಿ ಉಚಿತವಾಗಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08172268374 ಮತ್ತು 9743144950, 9482120663 ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜೆ.ಬಿ. ವಿಜಯಲಕ್ಷ್ಮಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+