ಹಾಸನ - ಕೊಡಗು ಜಿಲ್ಲೆ ತಾಲೂಕುವಾರು ಮಳೆ ವರದಿ

ಹಾಸನ, ಸೆಪ್ಟೆಂಬರ್ 22: ಹಾಸನ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆ ಮಳೆಯಾಗಿರುವ ವರದಿ ಅನ್ವಯ ಹಾಸನ ತಾಲ್ಲೂಕಿನ ಗೊರೂರು 1.2 ಮಿ.ಮೀ ಮಳೆಯಾಗಿದೆ.

ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ 8.2 ಮಿ.ಮೀ, ಮಾರನಹಳ್ಳಿ 10.4 ಮಿ.ಮೀ, ಶುಕ್ರವಾರಸಂತೆ 13.2 ಮಿ.ಮೀ, ಹೊಸೂರು 7.1 ಮಿ.ಮೀ, ಹೆತ್ತೂರು 21.4 ಮಿ.ಮೀ, ಸಕಲೇಶಪುರ 2 ಮಿ.ಮೀ ಮಳೆಯಾಗಿದೆ.

ಅರಸೀಕೆರೆ ತಾಲ್ಲೂಕಿನ ಬಾಣಾವರ 27 ಮಿ.ಮೀ, ಜಾವಗಲ್ 6 ಮಿ.ಮೀ, ಗಂಡಸಿ 2.4 ಮಿ.ಮೀ, ಕಸಬಾ 22 ಮಿ.ಮೀ ಮಳೆಯಾಗಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ 14.6 ಮಿ.ಮೀ, ಹಿರಿಸಾವೆ 13.4 ಮಿ.ಮೀ ಮಳೆಯಾಗಿದೆ ಹಾಗೂ ಬೇಲೂರು ತಾಲ್ಲೂಕಿನ ಬೇಲೂರು 2 ಮಿ.ಮೀ, ಮಳೆಯಾಗಿದೆ.

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‌ಗಳಲ್ಲಿ): ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 4.42 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2383.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2438.49 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ, ವಿರಾಜಪೇಟೆ ತಾಲೂಕು ಮಳೆ

ಮಡಿಕೇರಿ, ವಿರಾಜಪೇಟೆ ತಾಲೂಕು ಮಳೆ

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.43 ಮಿ.ಮೀ. ಕಳೆದ ವರ್ಷ ಇದೇ ದಿನ 70.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3296.41 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3411.48 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.67 ಮಿ.ಮೀ. ಕಳೆದ ವರ್ಷ ಇದೇ ದಿನ 42.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1946.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2260.36 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕುವಾರು ಮಳೆ ವರದಿ

ಸೋಮವಾರಪೇಟೆ ತಾಲೂಕುವಾರು ಮಳೆ ವರದಿ

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.17 ಮಿ.ಮೀ. ಕಳೆದ ವರ್ಷ ಇದೇ ದಿನ 30.93 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1908.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1643.63 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 7.20, ಸಂಪಾಜೆ 14.50, ಭಾಗಮಂಡಲ 4, ವಿರಾಜಪೇಟೆ ಕಸಬಾ 5.40, ಹುದಿಕೇರಿ 13, ಶ್ರೀಮಂಗಲ 12.60, ಅಮ್ಮತ್ತಿ 3, ಸೋಮವಾರಪೇಟೆ ಕಸಬಾ 2, ಶಾಂತಳ್ಳಿ 4.40, ಕುಶಾಲನಗರ 0.60 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (22-09-2021) ವರದಿ

ಹಾರಂಗಿ ಜಲಾಶಯದ ನೀರಿನ ಮಟ್ಟ (22-09-2021) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.72 ಅಡಿಗಳು. ಕಳೆದ ವರ್ಷ ಇದೇ ದಿನ 2857.94 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.80 ಮಿ.ಮೀ., ಕಳೆದ ವರ್ಷ ಇದೇ ದಿನ 17.40 ಮಿ.ಮೀ., ಇಂದಿನ ನೀರಿನ ಒಳಹರಿವು 1377 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 7030 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1041 ಕ್ಯುಸೆಕ್, ನಾಲೆಗೆ 533 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 5010 ಕ್ಯುಸೆಕ್, ನಾಲೆಗೆ 500 ಕ್ಯುಸೆಕ್.

ರಾಜ್ಯದಲ್ಲಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+