Lok Sabha Election 2024 Result: ಹಾಸನದಲ್ಲಿ ಪ್ರಜ್ವಲ್‌ ಗೆಲ್ಲಲು ವಿಶೇಷ ಪೂಜೆ

ಹಾಸನ, ಜೂನ್‌ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಲಿ ಎಂದು ಜೆಡಿಎಸ್‌ ಶಾಸಕರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ಮಂಗಳವಾರ ಬೆಳಗ್ಗೆ ಆರಂಭವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ 14 ಟೇಬಲ್‌ಗಳಲ್ಲಿ ನಡೆಯಲಿದ್ದು, ಮಧ್ಯಾಹ್ನದ ವೇಳಗೆ ಫಲಿತಾಂಶದ ಚಿತ್ರಣ ಸಿಗುವ ನಿರೀಕ್ಷೆ ಇದೆ.

Hassan Lok Sabha Election 2024 Results JDS Leaders Temple Run

ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಕಾರ್ಯಕರ್ತರು, ಶಾಸಕರು ದೇವರ ಮೊರೆ ಹೋಗಿದ್ದಾರೆ. ಮತ ಎಣಿಕ ಕೇಂದ್ರಕ್ಕೆ ತೆರಳುವ ಮುನ್ನ ಹಾಸನ ಜೆಡಿಎಸ್ ಶಾಸಕ ಸ್ವರೂಪ್ ಅವರು ಕಾರ್ಯಕರ್ತರ ಜೊತೆ ನಗರದ ಎಂ. ಜಿ. ರಸ್ತೆಯಲ್ಲಿರುವ ಗಣಪತಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

ಕಾರ್ಯಕರ್ತರೊಂದಿಗೆ ತೆರಳಿದ ಹಾಸನದ ಜೆಡಿಎಸ್ ಶಾಸಕರು. ಹಾಸನದಲ್ಲಿ ಜೆಡಿಎಸ್‌ ಗೆಲುವು ಸಾಧಿಸಲಿ ಎಂದು ಪೂಜೆ ಸಲ್ಲಿಕೆ ಮಾಡಿದರು. ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ ಎಸ್‌ಐಟಿ ವಶದಲ್ಲಿದ್ದರೂ ಸಹ ಜೆಡಿಎಸ್ ನಾಯಕರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ.

ಏಪ್ರಿಲ್ 26ರ ಮತದಾನಕ್ಕೂ ಮೊದಲು ಪ್ರಜ್ವಲ್‌ ರೇವಣ್ಣರದ್ದು ಎಂದು ಆರೋಪಿಸಲಾದ ಅಶ್ಲೀಲ ವಿಡಿಯೋ ಬಿಡುಗಡೆಗೊಂಡು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಬಳಿಕ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ರೇವಣ್ಣ ಮೇ 31ರಂದು ರಾಜ್ಯಕ್ಕೆ ವಾಪಸ್ ಆಗಿದ್ದು, ಎಸ್‌ಐಟಿ ಅವರನ್ನು ಬಂಧಿಸಿದೆ.

ಹಾಸನದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಭಾರೀ ಪೈಪೋಟಿ ನೀಡಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾದ ಪ್ರಜ್ವಲ್ ರೇವಣ್ಣ ಅನುಪಸ್ಥಿತಿಯಲ್ಲಿಯೇ ಮತ ಎಣಿಕೆ ನಡೆಯುತ್ತಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿ ಪ್ರಜ್ವಲ್‌ ರೇವಣ್ಣ ಸಂಸದರಾಗಿದ್ದರು. ಈ ಬಾರಿ ಮತ್ತೆ ಅವರು ಅಭ್ಯರ್ಥಿ. ಕಳೆದ ಬಾರಿ ಹಾಸನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+