Lok Sabha Election 2024 Result: ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಮುನ್ನಡೆ
ಹಾಸನ, ಜೂನ್ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ.
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.

ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಸದ್ಯದ ಮಾಹಿತಿ ಪ್ರಕಾರ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್‌ರೇವಣ್ಣ 105314 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102890 ಮತಗಳನ್ನು ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಶದಲ್ಲಿದ್ದಾರೆ. ಜೂನ್ 6ರ ತನಕ ಅವರನ್ನು ಕೋರ್ಟ್ ಎಸ್‌ಐಟಿ ವಶಕ್ಕೆ ನೀಡಿದೆ.
ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆಲ್ಲಬೇಕು ಎಂದು ಜೆಡಿಎಸ್ ಶಾಸಕರು, ಕಾರ್ಯಕರ್ತರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಮಾಡಿಸುತ್ತಿದ್ದಾರೆ. ಅಶ್ಲೀಲ ವಿಡಿಯೋ ಹಗರಣ ಬೆಳಕಿಗೆ ಬಂದ ಬಳಿಕ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ದೇಶಾದ್ಯಂತ ಕುತೂಹಲ ಮೂಡಿಸಿದೆ.
ಸದ್ಯದ ಮಾಹಿತಿ ಪ್ರಕಾರ ಪ್ರಜ್ವಲ್‌ರೇವಣ್ಣ 180999 ಮತಗಳು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 177231 ಮತಗಳು. 3768 ಅಲ್ಪ ಮತಗಳಿಂದ ಪ್ರಜ್ವಲ್ ರೇವಣ್ಣ ಮುನ್ನಡೆ ಪಡೆದಿದ್ದಾರೆ. 2,255 ನೋಟಾ ಮತಗಳು ಚಲಾವಣೆಗೊಂಡಿವೆ.
ಹಾಸನ ಎಚ್. ಡಿ. ದೇವೇಗೌಡರ ಕುಟುಂಬದ ಪ್ರಭಾವ ಇರುವ ಕ್ಷೇತ್ರ. 2019ರ ಚುನಾವಣೆಯಲ್ಲಿ ಎಚ್. ಡಿ. ದೇವೇಗೌಡರು ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟರು. ಮೊದಲ ಚುನಾವಣೆಯಲ್ಲಿಯೇ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದರು.












Click it and Unblock the Notifications