ಹಾಸನ Lok Sabha Election 2024 Results LIVE: ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು
ಹಾಸನ, ಜೂನ್ 04: ಹಾಸನ ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಪ್ರಜ್ವಲ್ ರೇವಣ್ಣ ಕಾರಣಕ್ಕೆ ಫಲಿತಾಂಶ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಶೇ 77.68ರಷ್ಟು ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್. ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ.

ಪ್ರಜ್ವಲ್ ರೇವಣ್ಣರದ್ದು ಎಂದು ಆರೋಪಿಸಲಾದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಮತದಾನ ಮಾಡಿ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್ ಆಗಿದ್ದು, ಎಸ್‌ಐಟಿ ಅವರನ್ನು ಬಂಧಿಸಿದೆ.
2024ರ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ. ಚಿತ್ರಗಳು, ವಿಡಿಯೋ, ಫಲಿತಾಂಶದ ಕುರಿತು ನಾಯಕರ ಪ್ರತಿಕ್ರಿಯೆ, ಪಡೆದ ಮತಗಳ ನಿಖರ ಅಂಕಿ ಅಂಶಗಳ ಮಾಹಿತಿ ಈ ಪುಟದಲ್ಲಿದೆ.
ಲೋಕಸಭೆ ಚುನಾವಣೆ ಕ್ಷಣ-ಕ್ಷಣದ ಮಾಹಿತಿ
* ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.
* ಸಮಯ 11.40: ಹಾಸನದಲ್ಲಿ 13ನೇ ಸುತ್ತು ಎಣಿಕೆ. ಪ್ರಜ್ವಲ್ ರೇವಣ್ಣ 4,76,314 ಮತ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 503424 ಮತಗಳು. 27,110 ಮತಗಳಿಂದ ಕಾಂಗ್ರೆಸ್ ಮುನ್ನಡೆ. 6,709 ನೋಟಾ ಮತಗಳ ಚಲಾವಣೆ.
* ಸಮಯ 11.12: ಹಾಸನದಲ್ಲಿ 9ನೇ ಸುತ್ತಿನ ಮತ ಎಣಿಕೆ. ಪ್ರಜ್ವಲ್ ರೇವಣ್ಣ 3,76,206 ಮತಗಳು. ಶ್ರೇಯಸ್ ಪಟೇಲ್ 3,86,393 ಮತಗಳು. 10187 ಮತಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 5,146 ನೋಟಾ ಮತಗಳು ಚಲಾವಣೆಗೊಂಡಿವೆ.
* ಸಮಯ 10.36: ಹಾಸನದಲ್ಲಿ 8ನೇ ಸುತ್ತು ಮತ ಎಣಿಕೆ. ಪ್ರಜ್ವಲ್ ರೇವಣ್ಣ 2,92,653 ಮತಗಳು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 2,89,479 ಮತಗಳು. 3,968 ನೋಟಾ ಮತಗಳು.
* ಸಮಯ 8 ಗಂಟೆ; ಹಾಸನದಲ್ಲಿ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಅಂಚೆ ಮತಗಳನ್ನು ಮೊದಲು ಬಂಡಲ್‌ಗಳಾಗಿ ವಿಂಗಡಿಸಿ ನಂತರ ಎಣಿಕೆ ಕಾರ್ಯ ಆರಂಭಿಸಲಾಗುತ್ತದೆ. ಹಾಸನದಲ್ಲಿ ಚಲಾವಣೆಗೊಂಡಿರುವ ಒಟ್ಟು ಅಂಚೆ ಮತಗಳು 9323.
* ಸಮಯ 7.45: ಚುನಾವಣಾಧಿಕಾರಿಗಳು, ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದೆ. ಮತ ಎಣಿಕೆ ಕಾರ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
* ಸಮಯ 7 ಗಂಟೆ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಗೆಲುವಿಗಾಗಿ ಶಾಸಕರು, ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ. ಮತ ಎಣಿಕ ಕೇಂದ್ರಕ್ಕೆ ತೆರಳುವ ಮುನ್ನ ಹಾಸನದ ಜೆಡಿಎಸ್ ಶಾಸಕ ಸ್ವರೂಪ್ ಹಾಸನ ನಗರದ ಎಂ. ಜಿ. ರಸ್ತೆಯಲ್ಲಿರುವ ಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿದ್ದಾರೆ.
* ಸಮಯ 6 ಗಂಟೆ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಶದಲ್ಲಿದ್ದಾರೆ. ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಲಿದ್ದಾರೆಯೇ? ಎಂದು ಜನರು ಕುತೂಹಲದಿಂದ ಕಾಯುತ್ತಿದ್ದಾರೆ.
* ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.
* ಹಾಸನ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತವರು ಕ್ಷೇತ್ರ. ದೇವೇಗೌಡರ ಕುಟುಂಬದ ಭಾರೀ ಪ್ರಭಾವ ಕ್ಷೇತ್ರದಲ್ಲಿದೆ. ಅವರ ಕುಟುಂಬಕ್ಕೆ ರಾಜಕೀಯ ನೆಲೆ ಒದಗಿಸಿದ ಕ್ಷೇತ್ರ ಹಾಸನ.
* ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಹಾಸನ ಜೆಡಿಎಸ್‌ಗೆ ಸಿಕ್ಕಿದೆ. ಎಚ್. ಡಿ. ದೇವೇಗೌಡರ ಮೊಮ್ಮಗ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮೈತ್ರಿಕೂಟದ ಅಭ್ಯರ್ಥಿ. ಎಂ. ಶ್ರೇಯಸ್ ಪಟೇಲ್ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ.












Click it and Unblock the Notifications