ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ 3 ದಿನ ಸಂಚಾರ ಸ್ಥಗಿತ

ಹಾಸನ, ಜುಲೈ 23 : ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮೂರು ದಿನಗಳ ಕಾಲ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಭೂ ಕುಸಿತವಾಗುವ ಪ್ರದೇಶದಲ್ಲಿ ನೈಋತ್ಯ ರೈಲ್ವೆ ಕಾಮಗಾರಿಯನ್ನು ಕೈಗೊಂಡಿದೆ.

ಸುಬ್ರಮಣ್ಯ-ಸಕಲೇಶಪುರ ನಡುವಿನ ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಉರುಳುವ ಸ್ಥಿತಿಯಲ್ಲಿರುವ ಬಂಡೆಯನ್ನು ತೆರವುಗೊಳಿಸಲಾಗುತ್ತಿದೆ. ಆದ್ದರಿಂದ, ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ರೈಲ್ವೆ ಮಾರ್ಗದ ಸುರಂಗ ಮಾರ್ಗದ ಬಳಿ ಹಳಿಯ ಮೇಲೆ ಕೆಲವು ಬಂಡೆಗಳು ಉರುಳುವ ಸ್ಥಿತಿಯಲ್ಲಿದೆ. ಬಂಡೆಯನ್ನು ಸ್ಫೋಟಿಸಿ, ಜೆಸಿಬಿ ಯಂತ್ರಗಳ ಸಹಾಯದಿಂದ ಅವುಗಳನ್ನು ತೆರವು ಮಾಡಲಾಗುತ್ತಿದೆ. ಈ ಕಾಮಗಾರಿ ಮೂರು ದಿನಗಳ ಕಾಲ ನಡೆಯುವ ನಿರೀಕ್ಷೆ ಇದೆ.

Hassan Mangaluru train service suspend for three days

ಮಂಗಳವಾರ ಹೊರಡಬೇಕಿದ್ದ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್, ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್, ಬುಧವಾರ ಸಂಚಾರ ನಡೆಸಬೇಕಿದ್ದ ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ.

ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್, ಗುರುವಾರ ಹೊರಡಬೇಕಿದ್ದ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.

ಮಂಗಳೂರಿಗೆ ಸೀಮಿತ : ಕಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು- ಕಾರವಾರ ಮತ್ತು ಕಾರವಾರ ಕೆಎಸ್ಆರ್ ಬೆಂಗಳೂರು ನಡುವೆ ಮಂಗಳವಾರ, ಬುಧವಾರ ಮತ್ತು ಗುರುವಾರ ಸಂಚರಿಸಬೇಕಿದ್ದ ರೈಲುಗಳನ್ನು ಮಂಗಳೂರಿಗೆ ಸೀಮಿತಗೊಳಿಸಲಾಗಿದೆ.

ಮಾರ್ಗ ಬದಲಾವಣೆ : ಕೆಎಸ್‌ಆರ್ ಬೆಂಗಳೂರು-ಕಣ್ಣೂರು/ಕಾರವಾರ ಎಕ್ಸ್‌ಪ್ರೆಸ್ ರೈಲು ಮಂಗಳವಾರ ಮತ್ತು ಬುಧವಾರ ಮೈಸೂರು, ಹಾಸನ, ಸಕಲೇಶಪುರ, ಸುಬ್ರಮಣ್ಯ ಬದಲು ಜೋಲಾರ್‌ಪೇಟ್‌, ಸೇಲಂ, ಪಲ್ಫಾಟ್, ಶೋರನೂರು ಮಾರ್ಗವಾಗಿ ಸಂಚಾರ ನಡೆಸಲಿದೆ.

ಕಣ್ಣೂರು/ಕಾರವಾರ-ಕೆಎಸ್ಆರ್‌ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮಂಗಳವಾರ ಮತ್ತು ಬುಧವಾರ ಸುಬ್ರಮಣ್ಯ ರೋಡ್, ಸಕಲೇಶಪುರ, ಹಾಸನ, ಶ್ರವಣಬೆಳಗೊಳದ ಬದಲು ಶೋರನೂರು, ಪಾಲ್ಫಟ್, ಸೇಲಂ, ಜೋಲಾರಪೇಟೆ ಮಾರ್ಗವಾಗಿ ಸಂಚಾರ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+