ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣರಾಜ್ಯೋತ್ಸವಕ್ಕೆ ಹಾಸನದ ಬುಡಕಟ್ಟು ದಂಪತಿಗಳು

|
Google Oneindia Kannada News

ಹಾಸನ, ಜನವರಿ 23 : ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸನದ ಹಕ್ಕಿಪಿಕ್ಕಿ ಸಮುದಾಯದ ದಂಪತಿಗಳು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಹಿಂದಿನಿಂದಲೂ ಪ್ರತಿ ರಾಜ್ಯದಿಂದ ಇಬ್ಬರನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತಿದೆ. ಈ ಬಾರಿ ಕರ್ನಾಟಕದಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿಯ ಹಕ್ಕಿಪಿಕ್ಕಿ ಜನಾಂಗದ ಹೂರಾಜ್-ಚಂದೋಶಿ ದಂಪತಿ ಆಯ್ಕೆಯಾಗಿದ್ದಾರೆ.

ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ

ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತಂದು, ಅವರ ಸಂಸ್ಕೃತಿ, ಸಂಪ್ರದಾಯಗಳನ್ನು ಪರಿಚಯಿಸುವ ಸಲುವಾಗಿ 1965ರಿಂದ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವ ಬುಡಕಟ್ಟು ಜನಾಂಗದ ಇಬ್ಬರಿಗೆ ಅವಕಾಶ ನೀಡಲಾಗುತ್ತಿದೆ.

ಗಣರಾಜ್ಯೋತ್ಸವ ಆಚರಣೆ, ವಿಶೇಷತೆ ಏನು?ಗಣರಾಜ್ಯೋತ್ಸವ ಆಚರಣೆ, ವಿಶೇಷತೆ ಏನು?

Hassan Tribal Couple To Participate In Republic Day

ಹಾಸನದ ಹೂರಾಜ್ ದಂಪತಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದು, ವಿಮಾನದ ಮೂಲಕ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೊಡಗು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಜೊತೆಗಿರುತ್ತಾರೆ.

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ

ಗಣರಾಜ್ಯೋತ್ಸವದ ಪರೇಡ್ ವೀಕ್ಷಣೆ ಬಳಿಕ ರಾಷ್ಟ್ರಪತಿ, ಪ್ರಧಾನಮಂತ್ರಿಗಳ ಜೊತೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾಜ್ ಮಹಲ್‍ಸೆರಿದಂತೆ ದೆಹಲಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

English summary
Hassan district Belur taluk tribal couple Hooraj and his wife Chandoshi will participate in Republic Day function in New Delhi on January 26, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X