ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣ

|
Google Oneindia Kannada News

ಹಾಸನ, ಫೆಬ್ರವರಿ 24 : ಹಾಸನ ಲೋಕಸಭಾ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಯಾರು?. ಎಚ್.ಡಿ.ದೇವೇಗೌಡ ಅಥವ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ. ಈ ವಿಚಾರದ ಕುರಿತು ಭಾರಿ ಚರ್ಚೆ ನಡೆಯುತ್ತಿದೆ.

ಹಾಸನದಲ್ಲಿ ಶನಿವಾರ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು, 'ಚುನಾವಣೆಗೆ ಸ್ಪರ್ಧಿಸಲು ಸಾಹೇಬರು ನನಗೆ ಹೇಳಿದ್ದು ನಿಜ. ಆದರೆ, ಮತ್ತೆ ಅವರೇ ಅಭ್ಯರ್ಥಿ ಆಗಬೇಕು ಎಂಬ ನಮ್ಮ ಅನಿಸಿಕೆ ತಿಳಿಸಿದ್ದೇವೆ' ಎಂದು ಹೇಳಿದರು.

ಲೋಕಸಭೆ ಚುನಾವಣೆ: ಪ್ರಜ್ವಲ್‌ ರೇವಣ್ಣಗೆ ದೇವೇಗೌಡ ಗ್ರೀನ್ ಸಿಗ್ನಲ್ಲೋಕಸಭೆ ಚುನಾವಣೆ: ಪ್ರಜ್ವಲ್‌ ರೇವಣ್ಣಗೆ ದೇವೇಗೌಡ ಗ್ರೀನ್ ಸಿಗ್ನಲ್

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿದರೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ ಎಂದು ಮಾಜಿ ಸಚಿವ ಎ.ಮಂಜು ಹೇಳಿದ್ದರು.

ಪ್ರಜ್ವಲ್ ರೇವಣ್ಣ ರಂಗಪ್ರವೇಶಕ್ಕೆ ಎದುರಾಯಿತು ಹೊಸ ವಿಘ್ನ: ಈ ಬಾರಿ ಯಾರಿಂದ?ಪ್ರಜ್ವಲ್ ರೇವಣ್ಣ ರಂಗಪ್ರವೇಶಕ್ಕೆ ಎದುರಾಯಿತು ಹೊಸ ವಿಘ್ನ: ಈ ಬಾರಿ ಯಾರಿಂದ?

ಪ್ರಜ್ವಲ್ ರೇವಣ್ಣ ಹೇಳಿಕೆ ಹಾಸನ ಜಿಲ್ಲಾ ರಾಜಕೀಯದಲ್ಲಿ ಕುತೂಹಲ ಹುಟ್ಟು ಹಾಕಿದೆ. ಕೆಲವು ದಿನಗಳ ಹಿಂದೆ ಭವಾನಿ ರೇವಣ್ಣ ಅವರು ಸಹ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಹಾಸನ ಹೊರತುಪಡಿಸಿ ಬೇರೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆಯೇ? ಎಂದ ಪ್ರಶ್ನೆ ಎದ್ದಿದೆ....

ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜುಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಬೆಂಬಲಿಸಲ್ಲ : ಎ ಮಂಜು

ಪ್ರಜ್ವಲ್ ರೇವಣ್ಣ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಹೇಳಿದ್ದೇನು?

'ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಎಚ್.ಡಿ.ದೇವೇಗೌಡರೇ ಸ್ಪರ್ಧಿಸಬೇಕು ಎಂಬುದು ನಮ್ಮ ಆಸೆಯಾಗಿದ್ದು, ಸ್ಪರ್ಧಿಸುವುದು ಅವರ ಹಕ್ಕು' ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ದೇವೇಗೌಡರು ಹೇಳಿದ್ದೇನು?

ದೇವೇಗೌಡರು ಹೇಳಿದ್ದೇನು?

ಕೆಲವು ದಿನಗಳ ಹಿಂದೆ ಹಾಸನದಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ್ದ ಎಚ್.ಡಿ.ದೇವೇಗೌಡರು, 'ಈ ಬಾರಿಯ ಚುನಾವಣೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದರು.

ಈ ಬಾರಿ ದೇವೇಗೌಡರೇ ಸ್ಪರ್ಧಿಸಲಿ

ಈ ಬಾರಿ ದೇವೇಗೌಡರೇ ಸ್ಪರ್ಧಿಸಲಿ

'ಹಾಸನದಿಂದ ಎಚ್.ಡಿ.ದೇವೇಗೌಡರೇ ಚುನಾವಣೆಗೆ ಸ್ಪರ್ಧಿಸಲಿ ಎಂಬುದು ನನ್ನ ಒತ್ತಾಯವಾಗಿದೆ. ಈ ಬಗ್ಗೆ ದೇವೇಗೌಡರ ಜೊತೆಗೂ ಮಾತನಾಡಿದ್ದೇನೆ. ಅವರೇ ಸ್ಪರ್ಧೆ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಆಸೆ' ಎಂದು ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಹೇಳಿದ್ದರು.

ಮೈತ್ರಿ ಧರ್ಮ ಪಾಲಿಸಬೇಕು

ಮೈತ್ರಿ ಧರ್ಮ ಪಾಲಿಸಬೇಕು

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ.ಮಂಜು ಹೇಳಿಕೆಗೆ ತಿರುಗೇಟು ನೀಡಿದ ಪ್ರಜ್ವಲ್ ರೇವಣ್ಣ ಅವರು, 'ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಬೇಕು. ಹಾಸನದಲ್ಲಿ ನಾನು ಸ್ಪರ್ಧಿಸಿದರೆ ಬೆಂಬಲಿಸಿಸುವುದಿಲ್ಲ ಎಂದು ಎ.ಮಂಜು ಹೇಳಿದ್ದಾರೆ. ಬೆಂಬಲಿಸಲು ಇಷ್ಟವಿಲ್ಲದಿದ್ದರೆ ಕಾಂಗ್ರೆಸ್ ಸಹ ಅಭ್ಯರ್ಥಿ ಹಾಕಲಿ' ಎಂದು ತಿರುಗೇಟು ನೀಡಿದರು.

ಬಿಜೆಪಿ ಅಭ್ಯರ್ಥಿ ಯಾರು?

ಬಿಜೆಪಿ ಅಭ್ಯರ್ಥಿ ಯಾರು?

ಹಾಸನ ಜೆಡಿಎಸ್ ಭದ್ರಕೋಟೆ. ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಥವ ಎಚ್.ಡಿ.ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಅವರ ಎದುರಾಳಿ ಬಿಜೆಪಿ ಅಭ್ಯರ್ಥಿ ಯಾರು?.

2014ರ ಚುನಾವಣೆಯಲ್ಲಿ ಸಿ.ಎಚ್.ವಿಜಯ ಶಂಕರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 165688 ಮತಗಳನ್ನು ಪಡೆದಿದ್ದರು. ಈಗ ಅವರ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

English summary
Prajwal Revanna, son of the Minister H.D. Revanna said that H.D.Deve Gowda to contest form Hassan for the Lok Sabha Elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X