ಹಾಸನ: ದೇವೇಗೌಡರಿಂದ ಇಂದು ದೇವಾಸ್ಥಾನ ಲೋಕಾರ್ಪಣೆ
ಹಾಸನ ಮಾ.8 : ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿ ದೊಡ್ಡಗೇಣಿಗೆರೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಆಂಜನೇಯ ಸ್ವಾಮಿ, ಲಕ್ಷೀ ರಂಗನಾಥ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮವನ್ನು ಮಾ.8 ರಂದು ಬೆಳಗ್ಗೆ 11.30 ಗಂಟೆಗೆ ಏರ್ಪಡಿಸಲಾಗಿದೆ.
ಮಾಜಿ ಪ್ರಧಾನಿ, ಸಂಸದ ಎಚ್.ಡಿ. ದೇವೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶಾಸಕ ಎಚ್.ಡಿ. ರೇವಣ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ವಿಧಾನಸಭೆ ಶಾಸಕರಾದ, ಎಚ್.ಕೆ. ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡರು, ಸಿ.ಎನ್. ಬಾಲಕೃಷ್ಣ, ಮಾಜಿ ವಿಧಾನ ಸಭಾ ಸದಸ್ಯರಾದ ಎಂ.ಎಂ.ರಾಮಸ್ವಾಮಿ, ಮುಖಂಡರಾದ ಕೆ.ಎಂ. ರಾಜೇಗೌಡ್ರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹನುಮೇಗೌಡರು. ಓ.ಎ.ಎಂ.ಪಿ.ಎಸ್ ಅಧ್ಯಕ್ಷರಾದ ಕೃಷ್ಣೇಗೌಡರು, ತಾಲೂಕು ಪಂಚಾಯತಿ ಸದಸ್ಯರಾದ ದಿನೇಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯರಾಂ ಅವರು ಭಾಗವಹಿಸಲ್ಲಿದ್ದಾರೆ.












Click it and Unblock the Notifications