ಹಾಸನ: ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಿಂದ ದೂರ ಉಳಿದ ಎಚ್‌.ಡಿ.ರೇವಣ್ಣ ಕುಟುಂಬ, ಏಕೆ?

ಹಾಸನ, ಜೂನ್‌, 27: ಇಂದು ಹಾಸನ ಜಿಲ್ಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ದಿನಾಚರಣೆಯಿಂದ ಮಾಜಿ ಸಚಿವ ಎಚ್‌.ಡಿ.ರೇವಣ್ಣನವರ ಕುಟುಂಬ ದೂರ ಉಳಿದಿದೆ.

ರಾಜ್ಯಾದ್ಯಂತ ಇಂದು ನಾಡಪ್ರಭು ಕೆಂಪೇಗೌಡ ಜನ್ಮದಿನವನ್ನು ಆಚರಣೆ ಮಾಡಲಾಗಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲೂ ಕೂಡ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅದ್ಧೂರಿಯಾಗಿ ಕೆಂಪೇಗೌಡ ದಿನಾಚರಣೆಯನ್ನು ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಹೊಳೆನರಸೀಪುರ ಕ್ಷೇತ್ರದ ಶಾಸಕ ರೇವಣ್ಣ ಗೈರಾಗಿದ್ದಾರೆ.

HD Revanna family absence

ಅಲ್ಲದೆ ತಮ್ಮ ಪಕ್ಷದ ಇಬ್ಬರು ಶಾಸಕರು ಭಾಗಿಯಾದರೂ ಕೂಡ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರು ಕಾರ್ಯಕ್ರಮಕ್ಕೆ ಬರದೆ ಇರುವ ಬಗ್ಗೆ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ‌

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹಾಸನದ ಕಲಾಭವನದ ಬಳಿ‌ ಕೆಂಪೇಗೌಡ ಜಯಂತಿಯ ಮೆರವಣಿಗೆಗೆ ಚಾಲನೆ ನೀಡಿದ್ದು, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ನೋಡುಗರನ್ನು ಸೆಳೆದವು.

ಮೆರವಣಿಗೆಯು ಕಲಾಭವನದಿಂದ ಹೇಮಾವತಿ ಪ್ರತಿಮೆ, ಎನ್.ಆರ್‌.ವೃತ್ತದ ಮೂಲಕ ಸಾಗಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಬಹಿರಂಗ ಸಭೆಯನ್ನು ಮಾಡಲಾಗಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದು

ಮತ್ತೊಂದೆಡೆ ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಕೆಲಸ ಮಾಡಬೇಕು. ಆದ್ದರಿಂದ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಕಾರ್ಯಕರ್ತರು ಲೋಕಸಭಾ ಚುನಾವಣೆಯ ಉತ್ಸಾಹದಲ್ಲಿದ್ದಾರೆ. ಆದರೂ ಕೆಲವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ.‌ ನಾಯಕರು ಮಾತಿನ ಮೇಲೆ ಹಿಡಿತವಿಡಲಿ. ಹೇಳಿಕೆ ಕೊಡುವ ಎಲ್ಲರಿಗೂ ನೊಟೀಸ್ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೆ ಪಾರ್ಟಿ ಕಟ್ಟಿ ಲೋಕಸಭಾ ಚುನಾವಣೆಗಾಗಿ ಕೆಲಸ ಮಾಡಬೇಕು.‌ ಬೂತ್ ಗಟ್ಟಿ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕರ್ತರೊಡನೆ ಸಂವಾದ ಮಾಡಿದ್ದಾರೆ. ಕಾರ್ಯಕರ್ತರು ಚುನಾವಣಾ ಉತ್ಸಾಹದಲ್ಲಿದ್ದಾರೆ ಎಂದು ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧ ಎನ್ನುವ ಭರವಸೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರ್ಕಾರ ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾಪದ ಬಗ್ಗೆ ಮಾತನಾಡಿದ ಅವರು, ಗೋವುಗಳ ರಕ್ಷಣೆಗಾಗಿ ಬಿಜೆಪಿ ಕಾನೂನು ತಂದಿದೆ. ಕಾನೂನು ಜಾರಿಯಲ್ಲಿರುವಾಗ ಗೋಕಳ್ಳರ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಗೋ ಸಂಸ್ಕೃತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಗೋಹತ್ಯೆ ನಿಷೇಧ ಕಾನೂನು ಜಾರಿಮಾಡಿದೆ. ಮಹಾತ್ಮ ಗಾಂಧಿಯೂ ಗೋ ಸಂರಕ್ಷಣೆ ಆಗಬೇಕೆಂದು ಹೇಳಿದ್ದರು.‌ ಆದರೆ ಕೆಲ ಆಚರಣೆ ವೇಳೆ ಗೋಹತ್ಯೆಗಳಾಗುತ್ತಿದೆ. ಆದ್ದರಿಂದ ಪ್ರಿಯಾಂಕ ಖರ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+